alex Certify ಚಲನಚಿತ್ರವಾಗಲಿದೆ ಭೈರಪ್ಪನವರ ‘ಪರ್ವ’; ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಂದ ಆಕ್ಷನ್ – ಕಟ್…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಲನಚಿತ್ರವಾಗಲಿದೆ ಭೈರಪ್ಪನವರ ‘ಪರ್ವ’; ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಂದ ಆಕ್ಷನ್ – ಕಟ್…!

ಭೈರಪ್ಪರ 'ಪರ್ವ' ಸಿನಿಮಾ ಮಾಡಲು ಹೊರಟ ವಿವೇಕ್​ ಅಗ್ನಿಹೋತ್ರಿ

ಪದ್ಮಭೂಷಣ ಪುರಸ್ಕೃತ ಹಿರಿಯ ಸಾಹಿತಿ ಎಸ್ಎಲ್ ಭೈರಪ್ಪನವರ ‘ಪರ್ವ’ ಕಾದಂಬರಿ ಬೆಳ್ಳಿ ಪರದೆ ಮೇಲೆ ಮೂಡಿ ಬರುತ್ತಿದ್ದು, ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಿಸಿದ್ದ ವಿವೇಕ್ ಅಗ್ನಿಹೋತ್ರಿ ಈ ಚಿತ್ರಕ್ಕೆ ಆಕ್ಷನ್ – ಕಟ್ ಹೇಳಲಿದ್ದಾರೆ.

ಪಲ್ಲವಿ ಜೋಶಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಕನ್ನಡ, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿಬರಲಿದೆ. ಶನಿವಾರದಂದು ಭೈರಪ್ಪನವರು ಮೈಸೂರಿನಲ್ಲಿ ಈ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಿದ್ದು, ಈ ಸಂದರ್ಭದಲ್ಲಿ ನಿರ್ಮಾಪಕಿ ಪಲ್ಲವಿ ಜೋಶಿ, ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹಾಗೂ ಹಿರಿಯ ನಟ ಪ್ರಕಾಶ್ ಬೆಳವಾಡಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ, ಭೈರಪ್ಪನವರ ‘ಪರ್ವ’ ಕಾದಂಬರಿಯನ್ನು ಸಿನಿಮಾ ಮಾಡುವಂತೆ ವರ್ಷದ ಹಿಂದೆ ಪ್ರಕಾಶ್ ಬೆಳವಾಡಿ ಕರೆ ಮಾಡಿ ತಿಳಿಸಿದ್ದರು. ಇದೀಗ ಇದಕ್ಕೆ ಕಾಲ ಕೂಡಿ ಬಂದಿದ್ದು, ಈ ಸಿನಿಮಾ ಮೂರು ಭಾಗಗಳಲ್ಲಿ ಬರಲಿದೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...