ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐ ಆರ್ ಇ ಒ ಗ್ರೂಪ್ ಉಪಾಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ಲಲಿತ್ ಗೋಯಲ್ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.
ನಾಲ್ಕು ದಿನಗಳ ಕಾಲ ಸುದೀರ್ಘ ವಿಚಾರಣೆ ಬಳಿಕ ಇಡಿ ಅಧಿಕಾರಿಗಳು ಲಲಿತ್ ಗೋಯಲ್ ಅವರನ್ನು ಇಂದು ಬಂಧಿಸಿದೆ. 2010ರಿಂದ ಕಂಪನಿಯ ವಿರುದ್ಧ ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ಫೇಮಾ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಯಲ್ ಅವರನ್ನು ಇಡಿ ವಿಚಾರಣೆ ನಡೆಸಿದೆ.
ಕಳೆದ ವಾರ ವಿದೇಶಕ್ಕೆ ತೆರಳಲು ಗೋಯಲ್ ವಿಮಾನ ಹತ್ತುತ್ತಿದ್ದ ವೇಳೆ ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ಬಂಧಿಸಿದ್ದರು.