ರಾಯಚೂರು : ಸುಮಾರು 34,948 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ತಿಮ್ಮಾಪೂರ ಏತ ನೀರಾವರಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಲೋಕಾರ್ಪಣೆಗೊಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಮ್ಮಾಪೂರ ಏತ ನೀರಾವರಿ ಯೋಜನೆ ಲೋಕಾರ್ಪಣೆ ಮಾಡಿ, ಜಲ ಜೀವನ್ ಮಿಷನ್ (DBOT) ಯೋಜನೆಯ ಶಂಕುಸ್ಥಾಪನೆ ನೆರವೇರಿಸುವ ಜತೆಗೆ ಸಿಂಧನೂರು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸಿದರು.
ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಜಿಲ್ಲೆಯ ಶಾಸಕರುಗಳಾದ ಹಂಪಯ್ಯ ನಾಯಕ್, ಮಾನಪ್ಪ ಡಿ.ವಜ್ಜಲ್, ಬಸವನಗೌಡ ದದ್ದಲ್, ಡಾ.ಎಸ್.ಶಿವರಾಜ್ ಪಾಟೀಲ್, ಆರ್. ಬಸವನಗೌಡ ತುರ್ವಿಹಾಳ, ಶರಣಗೌಡ ಪಾಟೀಲ್ ಬಯ್ಯಾಪುರ ಸೇರಿ ಹಲವು ಮುಖಂಡರು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಶಂಕುಸ್ಥಾಪನೆ ಮತ್ತು ಉದ್ಘಾಟನೆಯಾದ ಅಭಿವೃದ್ಧಿ ಕಾರ್ಯಗಳ ಮಾಹಿತಿ
* ತಿಮ್ಮಾಪೂರ ಏತ ನೀರಾವರಿ ಯೋಜನೆ
* ಜಲ ಜೀವನ್ ಮಿಷನ್*
*ಸರಕಾರಿ ಪದವಿ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ
*ಕರ್ನಾಟಕ ಸಂಭ್ರಮ-50ರ ಪ್ರಯುಕ್ತ ಕನ್ನಡ ರಥದ ಮೆರವಣಿಗೆಗೆ ಚಾಲನೆ
*ಹದಿಹರೆಯದ ಹೆಣ್ಣುಮಕ್ಕಳಿಗೆ ಉಚಿತ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್ ವಿತರಣೆ
*ಸಿಂಧನೂರು ನಗರ ಸಂಚಾರ ಪೊಲೀಸ್ ಠಾಣೆ ಕಟ್ಟಡದ ಉದ್ಘಾಟನೆ.