ಗರ್ಭಾವಸ್ಥೆಯಲ್ಲಿ ಮಹಿಳೆಯರು ತಮ್ಮ ಆಹಾರದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಇಲ್ಲವಾದರೆ ಅದರ ಪರಿಣಾಮ ಮಗುವಿನ ಮೇಲಾಗುತ್ತದೆ. ಹಾಗಾಗಿ ಗರ್ಭಾವಸ್ಥೆಯಲ್ಲಿ ಮಹಿಳೆಯರು ಕಾಫಿ ಸೇವನೆ ಮಾಡುವುದು ಉತ್ತಮವೇ? ಇಲ್ಲವೇ? ಎಂಬುದನ್ನು ತಿಳಿದುಕೊಳ್ಳಿ.
ಅಧ್ಯಯನದ ಪ್ರಕಾರ ಗರ್ಭಿಣಿಯರು ದಿನಕ್ಕೆ 2-3 ಕಪ್ ಕಾಫಿ ಸೇವಿಸಿದರೆ ಮಗುವಿಗೆ ಹಾನಿಯಾಗುತ್ತದೆ ಎಂಬುದನ್ನು ತಿಳಿದುಕೊಂಡಿದ್ದಾರೆ. ಗರ್ಭಿಣಿ ಇಲಿಗಳ ಮೇಲೆ ಈ ಪ್ರಯೋಗ ಮಾಡಿದಾಗ ಕೆಫೀನ್ ಮಗುವಿನ ಬೆಳವಣೆಗೆಯ ಮೇಲೆ ಪರಿಣಾಮ ಬೀರುತ್ತದೆ ಎಂಬುದನ್ನು ಅವರು ಕಂಡುಕೊಂಡಿದ್ದಾರೆ.
ಹಾಗಾಗಿ ಗರ್ಭಾವಸ್ಥೆಯಲ್ಲಿ ಮಹಿಳೆಯರು 2-3 ಕಪ್ ಕಾಫಿ ಸೇವಿಸಿದರೆ ಮಗುವಿನ ಯಕೃತ್ತಿನ ಬೆಳವಣೆಗೆಯಲ್ಲಿ ಕುಂಠಿತವಾಗುವುದು, ಬೆಳವಣಿಗೆಯ ಹಾರ್ಮೋನ್ ಮಟ್ಟವನ್ನು ಬದಲಾಯಿಸಬಹುದು ಎಂದು ತಿಳಿಸಿದ್ದಾರೆ. ಆದ ಕಾರಣ ಗರ್ಭಾವಸ್ಥೆಯಲ್ಲಿ ಕಾಫಿಯಿಂದ ದೂರವಿರುವುದೇ ಉತ್ತಮ ಎಂಬುದಾಗಿ ಸಂಶೋಧಕರು ಶಿಫಾರಸ್ಸು ಮಾಡಿದ್ದಾರೆ.