ಗರ್ಭಾವಸ್ಥೆಯಲ್ಲಿ ಮಹಿಳೆಯರು ಯಾವುದೇ ಆಹಾರ ಪದಾರ್ಥ ಸೇವಿಸುವಾಗ ಎಚ್ಚರಿಕೆ ವಹಿಸಬೇಕು. ಇಲ್ಲವಾದರೆ ಇದರಿಂದ ಮಗುವಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಈ ಸಮಯದಲ್ಲಿ ಕೆಲವು ಆರೋಗ್ಯಕರ ಆಹಾರ ಪದಾರ್ಥಗಳಾದ ಪಪ್ಪಾಯ, ಅನಾನಸ್ ಮುಂತಾದವುಗಳನ್ನು ಸೇವಿಸುವುದನ್ನು ತಪ್ಪಿಸಬೇಕಾಗುತ್ತದೆ. ಹಾಗಾದರೆ ಗರ್ಭಾವಸ್ಥೆಯಲ್ಲಿ ತೆಂಗಿನ ಕಾಯಿ ಸೇವಿಸಬಹುದೇ? ಎಂಬುದನ್ನು ತಿಳಿಯಿರಿ.
ತೆಂಗಿನ ಕಾಯಿ ಒಂದು ಆರೋಗ್ಯಕರ ಆಹಾರ. ಇದರಲ್ಲಿ ಫೈಬರ್, ಪೊಟ್ಯಾಸಿಯಂ, ಸೋಡಿಯಂ, ಕ್ಯಾಲ್ಸಿಯಂ, ಮುಂತಾದ ಅನೇಕ ಪೋಷಕಾಂಶಗಳಿವೆ. ಇದರಲ್ಲಿ ಕಬ್ಬಿಣಾಂಶ ಸಮೃದ್ಧವಾಗಿರುವ ಕಾರಣ ಇದು ರಕ್ತಹೀನತೆ ಸಮಸ್ಯೆಯನ್ನು ನಿವಾರಿಸುತ್ತದೆ. ಹಾಗಾಗಿ ಗರ್ಭಾವಸ್ಥೆಯಲ್ಲಿ ಮಹಿಳೆಯರು ತೆಂಗಿನಕಾಯಿಯನ್ನು ಸೇವಿಸಬಹುದಂತೆ.
ಅಲ್ಲದೇ ಇದನ್ನು ಸೇವಿಸುವುದರಿಂದ ಅವರಲ್ಲಿ ಮೂತ್ರದ ಸೋಂಕಿನ ಸಮಸ್ಯೆ ಕಾಡುವುದಿಲ್ಲವಂತೆ. ಇದು ಗರ್ಭಿಣಿಯರಲ್ಲಿ ಬೆಳಗಿನ ಬೇನೆ ಮತ್ತು ಕಾಲುನೋವಿನ ಸಮಸ್ಯೆಯನ್ನು ನಿವಾರಿಸುತ್ತದೆಯಂತೆ. ಇದು ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸುತ್ತದೆಯಂತೆ ಮತ್ತು ಮಲಬದ್ಧತೆ ಸಮಸ್ಯೆಯನ್ನು ದೂರ ಮಾಡುತ್ತದೆಯಂತೆ.
ಆದರೆ ಇದನ್ನು ಸರಿಯಾದ ಪ್ರಮಾಣದಲ್ಲಿ ಸೇವಿಸಿ. ಇಲ್ಲವಾದರೆ ಇದರಿಂದ ಬೊಜ್ಜು ಹೆಚ್ಚಾಗುತ್ತದೆ. ಇದರಿಂದ ದೇಹದ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಬಹುದಂತೆ.