alex Certify OMG : ಪೋಷಕರು ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ..? : ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

OMG : ಪೋಷಕರು ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ..? : ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣು

ರಾಯಚೂರು : ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡ ಪ್ರತ್ಯೇಕ ಘಟನೆ ಕಲಬುರಗಿ ಹಾಗೂ ರಾಯಚೂರಿನಲ್ಲಿ ನಡೆದಿದೆ.

ಕಲಬುರಗಿಯಲ್ಲಿ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ

ಕಲಬುರಗಿಯ ಸೇಡಂ ನ ಕೋಟ್ಲಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾವೇರಿ (17) ಎಂಬ ಪಿಯುಸಿ ವಿದ್ಯಾರ್ಥಿನಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರಿಯಾಗಿ ಓದು ಎಂದು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ರಾಯಚೂರಿನಲ್ಲಿ SSLC ವಿದ್ಯಾರ್ಥಿನಿ ಆತ್ಮಹತ್ಯೆ

ರಾಯಚೂರಿನ ದೇವದುರ್ಗ ವಸತಿ ಶಾಲೆಯಲ್ಲಿ 10 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಪವಿತ್ರಾ (15) ಎಂಬ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಕೋಣೆಯಲ್ಲಿ ಫ್ಯಾನ್ ಗೆ ವೇಲ್ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆಗೂ ಓದು ಇಷ್ಟವಿರಲಿಲ್ಲವೆಂದು ಹೇಳಲಾಗಿದ್ದು, ಪೋಷಕರು ಬೈದಿದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...