ಗಾಝಾ : ಇಸ್ರೇಲ್-ಹಮಾಸ್ ನಡುವಿನ ಯುದ್ಧ ಮುಂದುವರೆದಿದ್ದು, ಮಘಾಜಿ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ ಪರಿಣಾಮ 30 ಪ್ಯಾಲೆಸ್ಟೈನಿಯರು ಸಾವನ್ನಪ್ಪಿದ್ದಾರೆ.
ಇಸ್ರೇಲ್ ಪ್ರಧಾನಿಬೆಂಜಮಿನ್ ನೆತನ್ಯಾಹು ಪ್ರತಿಕ್ರಿಯಿಸಿ, ಆಸ್ಪತ್ರೆಗಳ ಮೇಲೆ ಬಾಂಬ್ ದಾಳಿ ನಡೆಸುವ ಮೂಲಕ ನಾಗರಿಕರನ್ನು ರಕ್ಷಿಸುವಂತೆ ಒತ್ತಾಯಿಸಿದ್ದಾರೆ ಎಂದು ಫೆಲೆಸ್ತೀನ್ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಗಾಝಾದ ಅಜರ್ ವಿಶ್ವವಿದ್ಯಾಲಯದ ಮೇಲೆ ಇಸ್ರೇಲ್ ಬಾಂಬ್ ದಾಳಿ ನಡೆಸಿದೆ ಎಂದು ಪ್ಯಾಲೆಸ್ಟೈನ್ ನ ಉಪ ವಿದೇಶಾಂಗ ಸಚಿವ ಅಮಲ್ ಜಾಡೌ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ತಿಳಿಸಲಾಗಿದೆ.