ಜೆರುಸಲೇಂ: ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಉಭಯ ದೇಶಗಳ ನಾಯಕರು ಪರಸ್ಪರರ ಮೇಲೆ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ರಾತ್ರಿ ಇರಾನ್ ನಡೆಸಿದ ದಾಳಿಗೆ ಪ್ರತಿ ದಾಳಿ ನಡೆಸುವುದಾಗಿ ಇಸ್ರೇಲ್ ಗುಡುಗಿದೆ. ಇಸ್ರೇಲ್ ನಿಂದ ಪ್ರತಿ ದಾಳಿ ನಡೆದಲ್ಲಿ ಭಾರಿ ಪ್ರಮಾಣದಲ್ಲಿ ಇರಾನ್ ಮರುದಾಳಿ ನಡೆಸಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಹೀಗೆ ಇಸ್ರೇಲ್ ಮತ್ತು ಇರಾನ್ ಸಂಘರ್ಷ ತೀವ್ರಗೊಳ್ಳುತ್ತಿದ್ದಂತೆ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆ ಕಂಡಿದೆ. ಬ್ರೆಂಟ್ ಕಚ್ಚಾ ತೈಲ ದರ ಪ್ರತಿ ಬ್ಯಾರಲ್ ಗೆ 75 ಡಾಲರ್ ದಾಟಿದೆ. ಭಾರತ ಹೆಚ್ಚಿನ ಪ್ರಮಾಣದ ತೈಲವನ್ನು ಇರಾನ್ ನಿಂದ ಆಮದು ಮಾಡಿಕೊಳ್ಳುತ್ತದೆ. ಉಭಯ ದೇಶಗಳ ನಡುವಿನ ಸಂಘರ್ಷ ಇನ್ನಷ್ಟು ತೀವ್ರಗೊಂಡಲ್ಲಿ ಕಚ್ಚಾ ತೈಲ ದರ ಭಾರಿ ಏರಿಕೆ ಕಾಣಲಿದೆ ಎಂದು ಹೇಳಲಾಗಿದೆ.