ನವದೆಹಲಿ: ಇಸ್ರೇಲ್ ರಾಯಭಾರ ಕಚೇರಿ ಸ್ಫೋಟ ಪ್ರಕರಣದಲ್ಲಿ ದೆಹಲಿ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಇಸ್ರೇಲ್ ರಾಯಭಾರ ಕಚೇರಿ ಸ್ಫೋಟ ಪ್ರಕರಣದಲ್ಲಿ ದೆಹಲಿ ಪೊಲೀಸರು ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.
ಡಿಸೆಂಬರ್ 26 ರಂದು ಇಸ್ರೇಲ್ ರಾಯಭಾರ ಕಚೇರಿಯ ಬಳಿ ಅನುಮಾನಾಸ್ಪದ ಸ್ಫೋಟಗೊಂಡು ಆತಂಕ ಸೃಷ್ಟಿಸಲಾಗಿತ್ತು. ಘಟನೆ ಸಂಬಂಧ ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.