ಗಾಝಾದಲ್ಲಿ ಆಹಾರ ಸಹಾಯಕ್ಕಾಗಿ ಕಾಯುತ್ತಿದ್ದ ಜನರ ಮೇಲೆ ಇಸ್ರೇಲ್ ಗುರುವಾರ ನಡೆಸಿದ ಶೆಲ್ ದಾಳಿಯಲ್ಲಿ ಕನಿಷ್ಠ 20 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 155 ಜನರು ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ತೀನ್ ಎನ್ಕ್ಲೇವ್ನಲ್ಲಿರುವ ಆರೋಗ್ಯ ಸಚಿವಾಲಯವನ್ನು ಉಲ್ಲೇಖಿಸಿ ವರದಿ ತಿಳಿಸಿದೆ.
ದಾಳಿಯಲ್ಲಿ 155 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿದೆ ಎಂದು ಮೂಲಗಳು ತಿಳಿಸಿದೆ.
ಗಾಝಾದ ಕುವೈತ್ ವೃತ್ತದಲ್ಲಿ ಆಹಾರ ಸಹಾಯಕ್ಕಾಗಿ ಕಾಯುತ್ತಿರುವ ನಾಗರಿಕರ ಗುಂಪನ್ನು ಗುರಿಯಾಗಿಸಿಕೊಂಡು ಇಸ್ರೇಲಿ ಆಕ್ರಮಿತ ಪಡೆಗಳು ಈ ಘಟನೆಯನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಿದೆ ಫೆಲೆಸ್ತೀನ್ ಆರೋಗ್ಯ ಸಚಿವಾಲಯ ಹೇಳಿದೆ.