alex Certify ಚಂದ್ರಯಾನ 3 ಯಶಸ್ವಿಯಾಗಲೆಂದು ಇಸ್ರೋ ಅಧ್ಯಕ್ಷರಿಂದ ಅಯ್ಯಪ್ಪ ದೇಗುಲಕ್ಕೆ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಂದ್ರಯಾನ 3 ಯಶಸ್ವಿಯಾಗಲೆಂದು ಇಸ್ರೋ ಅಧ್ಯಕ್ಷರಿಂದ ಅಯ್ಯಪ್ಪ ದೇಗುಲಕ್ಕೆ ಭೇಟಿ

ಬೆಂಗಳೂರು : ಭಾರತೀಯ ಬಾಹ್ಯಕಾಶ ಸಂಸ್ಥೆ (ISRO)ದ ಮಹತ್ವಾಕಾಂಕ್ಷಿ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವಕ್ಕೆ ತಲುಪಲು ಹಂತಿಮ ಹಂತಕ್ಕೆ ಬಂದಿದ್ದು, ಸಂಜೆ 5.44 ರಿಂದ ವಿಕ್ರಮ್ ಲ್ಯಾಂಡರ್ ನ ವೇಗ ತಗ್ಗಿಸುವ ಪ್ರಕ್ರಿಯೆ ಆರಂಭವಾಗಲಿದೆ.

ಚಂದ್ರಯಾನ-3 ಯಶಸ್ವಿಯಾಗಿ ದೇಶಾದ್ಯಂತ ಮಂದೀರ, ಮಸೀದಿ, ಚರ್ಚ್ ಗಳಲ್ಲಿ ಪ್ರಾರ್ಥನೆ ಮಾಡುತ್ತಿದ್ದು, ಈ ನಡುವೆ ಇಸ್ರೋ ವಿಜ್ಞಾನಿಗಳ ಜೊತೆ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಚಂದ್ರಯಾನ-3 ಯಶಸ್ವಿಯಾಗಲೆಂದು ಪ್ರಾರ್ಥನೆ ಸಲ್ಲಿಸಿದ್ದಾರೆ.

ಭಾರತೀಯ ಬಾಹ್ಯಾಕಾಶ ನೌಕೆ ಚಂದ್ರನ ಸಮೀಪವನ್ನು ತಲುಪಿದ್ದು, ಸಂಜೆ 6.04 ಗಂಟೆ ವೇಳೆಗೆ ಚಂದ್ರನ ಮೇಲ್ಮೈಯಲ್ಲಿ ಮೃದುವಾಗಿ ಇಳಿಯಲು ಸಜ್ಜಾಗಿದೆ. ಅದಕ್ಕೂ ಮುನ್ನ ವಿಕ್ರಮ್ ಲ್ಯಾಂಡರ್ ನ ವೇಗವನ್ನು ತಗ್ಗಿಸುವ ಕಾರ್ಯ ಸಂಜೆ 5.44ರಿಂದಲೇ ಲ್ಯಾಂಡಿಂಗ್ ಪ್ರಕ್ರಿಯೆ ಆರಂಭವಾಗಲಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೈಯಲ್ಲಿ ಸ್ಪರ್ಶ ಮಾಡಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...