ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಮುಂದಿನ ಅಧ್ಯಕ್ಷರಾಗಿ ಡಾ. ವಿ. ನಾರಾಯಣನ್ ಅವರನ್ನು ನೇಮಿಸಲಾಗಿದೆ. ಅವರು ಜನವರಿ 14 ರಂದು ಪ್ರಸ್ತುತ ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಇಸ್ರೋದ ಪ್ರತಿಷ್ಠಿತ ವಿಜ್ಞಾನಿ ಡಾ. ನಾರಾಯಣನ್ ಪ್ರಸ್ತುತ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್(LPSC) ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಭಾರತೀಯ ಬಾಹ್ಯಾಕಾಶ ಕಾರ್ಯಕ್ರಮದಲ್ಲಿ ಸುಮಾರು ನಾಲ್ಕು ದಶಕಗಳ ಅನುಭವವನ್ನು ಹೊಂದಿರುವ ಡಾ. ನಾರಾಯಣನ್ ಇಸ್ರೋದಲ್ಲಿ ಹಲವಾರು ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಅವರ ಪರಿಣತಿಯು ಪ್ರಾಥಮಿಕವಾಗಿ ರಾಕೆಟ್ ಮತ್ತು ಬಾಹ್ಯಾಕಾಶ ನೌಕೆ ಪ್ರೊಪಲ್ಷನ್ ಮೇಲೆ ಕೇಂದ್ರೀಕರಿಸುತ್ತದೆ.
ಇಸ್ರೋಗೆ ಹೊಸ ಮುಖ್ಯಸ್ಥರಾಗಿ ಡಾ.ವಿ. ನಾರಾಯಣನ್ ಅವರು ಎಸ್. ಸೋಮನಾಥ್ ಅವರಿಂದ ಜನವರಿ 14 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.