ಬೆಂಗಳೂರು : ಹಿರೇಮಗಳೂರು ಕಣ್ಣನ್ ಅವರಿಗೆ ನೋಟಿಸ್ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಹಿರೇಮಗಳೂರು ಕಣ್ಣನ್ ಅವರಿಗೆ ತಸ್ತೀಕ್ ಹಣ ವಾಪಾಸು ನೀಡುವಂತೆ ನೋಟಿಸ್ ನೀಡಿರುವುದರಲ್ಲಿ ತಹಶೀಲ್ದಾರ್ ತಪ್ಪಿದೆ ಹೊರತು ಕಣ್ಣನ್ ಅವರ ತಪ್ಪಿಲ್ಲ. ನೋಟಿಸ್ ಅನ್ನು ಹಿಂಪಡೆಯಲು ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ. ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಶೀಲ್ದಾರರು, ಅವರಿಂದಲೇ ಬಾಕಿ ಹಣ ಕಟ್ಟಿಸಿಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಹಿರೇಮಗಳೂರಿನಲ್ಲಿನ ದೇವಸ್ಥಾನದಲ್ಲಿ ಪೂಜೆ ಮಾಡುತ್ತಿದ್ದ ಹಿರೇಮಗಳೂರು ಕಣ್ಣನ್ ಅವರಿಗೆ ಸರಕಾರದ ವತಿಯಿಂದ ನೀಡಲಾಗುತ್ತಿದ್ದ ವೇತನವನ್ನು ಹಿಂದಿರುಗಿಸುವಂತೆ ಜಾರಿಗೊಳಿಸಲಾಗಿದ್ದ ನೋಟಿಸನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರ ಸೂಚಿಸಿತ್ತು. ವೇತನ ಹಿಂದಿರುಗಿಸುವಂತೆ ನೀಡಲಾಗಿದ್ದ ನೋಟಿಸ್ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ಷೇಪಗಳು ಬಂದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಸರ್ಕಾರ ನೋಟಿಸನ್ನು ಹಿಂಪಡೆಯಲು ಮುಂದಾಗಿದೆ.