ಇಂಫಾಲ್ : ಐಎನ್ಎಸ್ ಇಂಫಾಲ್ ಇಂದು ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡಿರುವುದು ಭಾರತಕ್ಕೆ ಹೆಮ್ಮೆಯ ಕ್ಷಣ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಿ ಮೋದಿ ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಇದು ರಕ್ಷಣಾ ಕ್ಷೇತ್ರದಲ್ಲಿ ಭಾರತದ ಹೆಚ್ಚುತ್ತಿರುವ ಸ್ವಾವಲಂಬನೆಗೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. “ಐಎನ್ಎಸ್ ಇಂಫಾಲ್ ಅನ್ನು ನಮ್ಮ ನೌಕಾಪಡೆಗೆ ನಿಯೋಜಿಸಿರುವುದು ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ, ಇದು ರಕ್ಷಣಾ ಕ್ಷೇತ್ರದಲ್ಲಿ ಭಾರತದ ಹೆಚ್ಚುತ್ತಿರುವ ಸ್ವಾವಲಂಬನೆಗೆ ಸಾಕ್ಷಿಯಾಗಿದೆ. ಇದು ನಮ್ಮ ನೌಕಾ ಉತ್ಕೃಷ್ಟತೆ ಮತ್ತು ಎಂಜಿನಿಯರಿಂಗ್ ಪರಾಕ್ರಮವನ್ನು ಪ್ರತಿಬಿಂಬಿಸುತ್ತದೆ. ಆತ್ಮನಿರ್ಭರತೆಯ ಈ ಮೈಲಿಗಲ್ಲಿನಲ್ಲಿ ಭಾಗಿಯಾಗಿರುವ ಎಲ್ಲರಿಗೂ ಅಭಿನಂದನೆಗಳು. ನಾವು ನಮ್ಮ ಸಮುದ್ರಗಳನ್ನು ಭದ್ರಪಡಿಸುತ್ತಲೇ ಇರುತ್ತೇವೆ ಮತ್ತು ನಮ್ಮ ರಾಷ್ಟ್ರವನ್ನು ಬಲಪಡಿಸುತ್ತೇವೆ ಎಂದು ಹೇಳಿದ್ದಾರೆ.