ನಟಿ ಲೀಲಾವತಿ ಪ್ರತಿಭೆಗೆ ‘ಪದ್ಮಶ್ರೀ ಪ್ರಶಸ್ತಿ’ ಸಿಗದಿರುವುದು ನಿಜಕ್ಕೂ ದುರಂತ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಿರಿಯ ನಟಿ ಲೀಲಾವತಿ ಪ್ರತಿಭೆಗೆ ‘ಪದ್ಮಶ್ರೀ ಪ್ರಶಸ್ತಿ’ ಸಿಗದಿರುವುದು ನಿಜಕ್ಕೂ ದುರಂತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ನಟಿ ಲೀಲಾವತಿಯವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವವನ್ನು ಸಲ್ಲಿಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.

ಲೀಲಾವತಿ ಅವರು ತಮಗೆ ವಹಿಸಿದ ಪಾತ್ರಗಳಿಗೆ ಜೀವತುಂಬುತ್ತಿದ್ದ ಓರ್ವ ಪರಿಪೂರ್ಣ ಕಲಾವಿದೆ ಮಾತ್ರವಲ್ಲ, ಪರರ ಕಷ್ಟಕ್ಕೆ ಮಿಡಿಯುವ ತಾಯಿ ಹೃದಯದವರಾಗಿದ್ದರು. ಇಂತಹ ಅಪರೂಪದ ಜೀವವೊಂದನ್ನು ಕಳೆದುಕೊಂಡು ನಾಡು ಇಂದು ಬಡವಾಗಿದೆ.  ಅವರ ಪ್ರತಿಭೆಗೆ ಪದ್ಮಶ್ರೀ ಪ್ರಶಸ್ತಿಯಂತಹ ರಾಷ್ಟ್ರಮಟ್ಟದ ಪ್ರಶಸ್ತಿ ದೊರೆಯದಿರುವುದು ದುರಂತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅವರ ಕುಟುಂಬ ಹಾಗೂ ಅಪಾರ ಅಭಿಮಾನ ಬಳಗಕ್ಕೆ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಹಾರೈಸಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read