alex Certify ನಟಿ ಲೀಲಾವತಿ ಪ್ರತಿಭೆಗೆ ‘ಪದ್ಮಶ್ರೀ ಪ್ರಶಸ್ತಿ’ ಸಿಗದಿರುವುದು ನಿಜಕ್ಕೂ ದುರಂತ : ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟಿ ಲೀಲಾವತಿ ಪ್ರತಿಭೆಗೆ ‘ಪದ್ಮಶ್ರೀ ಪ್ರಶಸ್ತಿ’ ಸಿಗದಿರುವುದು ನಿಜಕ್ಕೂ ದುರಂತ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಿರಿಯ ನಟಿ ಲೀಲಾವತಿ ಪ್ರತಿಭೆಗೆ ‘ಪದ್ಮಶ್ರೀ ಪ್ರಶಸ್ತಿ’ ಸಿಗದಿರುವುದು ನಿಜಕ್ಕೂ ದುರಂತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ನಟಿ ಲೀಲಾವತಿಯವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವವನ್ನು ಸಲ್ಲಿಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.

ಲೀಲಾವತಿ ಅವರು ತಮಗೆ ವಹಿಸಿದ ಪಾತ್ರಗಳಿಗೆ ಜೀವತುಂಬುತ್ತಿದ್ದ ಓರ್ವ ಪರಿಪೂರ್ಣ ಕಲಾವಿದೆ ಮಾತ್ರವಲ್ಲ, ಪರರ ಕಷ್ಟಕ್ಕೆ ಮಿಡಿಯುವ ತಾಯಿ ಹೃದಯದವರಾಗಿದ್ದರು. ಇಂತಹ ಅಪರೂಪದ ಜೀವವೊಂದನ್ನು ಕಳೆದುಕೊಂಡು ನಾಡು ಇಂದು ಬಡವಾಗಿದೆ.  ಅವರ ಪ್ರತಿಭೆಗೆ ಪದ್ಮಶ್ರೀ ಪ್ರಶಸ್ತಿಯಂತಹ ರಾಷ್ಟ್ರಮಟ್ಟದ ಪ್ರಶಸ್ತಿ ದೊರೆಯದಿರುವುದು ದುರಂತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅವರ ಕುಟುಂಬ ಹಾಗೂ ಅಪಾರ ಅಭಿಮಾನ ಬಳಗಕ್ಕೆ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಹಾರೈಸಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...