ಬಳ್ಳಾರಿ: ಜಿಲ್ಲೆಯ ಎಲ್ಲಾ ವಕ್ಫ್ ಸಂಸ್ಥೆಗಳು ರಾಜ್ಯ ವಕ್ಫ್ ಮಂಡಳಿಯ ಮಾದರಿ ನಿಯಮಾವಳಿ ನಮೂನೆ ನಂ.42(ಬೈಲಾ) ಅಂಗೀಕರಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ವಕ್ಫ್ ಅಧಿಕಾರಿ ಸೈಯದ್ ಉಮ್ಮೆರ್ ಅಹ್ಮದ್ ಅವರು ತಿಳಿಸಿದ್ದಾರೆ.
ಈಗಾಗಲೇ ರಾಜ್ಯ ವಕ್ಫ್ ಮಂಡಳಿಯಲ್ಲಿ ನೋಂದಣಿಯಾದ ಸಂಸ್ಥೆಗಳು ಉಚ್ಛ ನ್ಯಾಯಾಲಯವು 2024 ಏ.23 ರಂದು ಹೊರಡಿಸಿರುವ ಆದೇಶದಂತೆ ಮಾದರಿ ನಿಯಮಾವಳಿಯನ್ನು ಪಾಲಿಸಬೇಕು ಎಂದು ತಿಳಿಸಿದೆ.
ಈವರೆಗೂ ಮಾದರಿ ನಿಯಮಾವಳಿಯನ್ನು ಪಾಲಿಸದ ಜಿಲ್ಲೆಯ ವಕ್ಫ್ ಸಂಸ್ಥೆಗಳು ರಾಜ್ಯ ವಕ್ಫ್ ಮಂಡಳಿಯ ಅಂಗೀಕಾರಕ್ಕಾಗಿ ನಮೂನೆ.42 ನ್ನು ಸಂಬಂಧಿಸಿದ ದಾಖಲೆಗಳೊಂದಿಗೆ ಜಿಲ್ಲಾ ವಕ್ಫ್ ಕಚೇರಿಗೆ ಅತೀ ಶೀಘ್ರದಲ್ಲಿ ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.