ಬೆಂಗಳೂರು : ನ.1 ರಂದು ರಾಜ್ಯದ ಎಲ್ಲಾ ಐಟಿ ಬಿಟಿ ಕಂಪನಿ, ಶಾಲಾ-ಕಾಲೇಜುಗಳಲ್ಲಿ ‘ಕನ್ನಡ ರಾಜ್ಯೋತ್ಸವ’ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಕರ್ನಾಟಕ ರಾಜ್ಯ ಉದಯವಾಗಿ 70 ವರ್ಷ ಸಂದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ ನವೆಂಬರ್ 1ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಇನ್ನಷ್ಟು ವಿಶೇಷವಾಗಿ ಆಚರಿಸೋಣ. ಈ ನಿಟ್ಟಿನಲ್ಲಿ ಖಾಸಗಿ ಸಂಸ್ಥೆಗಳು, ಐಟಿ ಬಿಟಿ ಕಂಪನಿಗಳು, ಕಾರ್ಖಾನೆಗಳು, ಖಾಸಗಿ ಉದ್ಯಮಗಳು ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ರಾಜ್ಯದ ಎಲ್ಲಾ ಶಾಲೆ, ಕಾಲೇಜುಗಳು, ಐಟಿ, ಬಿಟಿ ಸಂಸ್ಥೆಗಳಲ್ಲಿಯೂ ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಟಿಪ್ಪಣಿ ಹೊರಡಿಸಿ ಸೂಚನೆ ನೀಡಿದ್ದಾರೆ.