![](https://kannadadunia.com/wp-content/uploads/2021/06/Vidhana_Soudha_750_1.gif)
ಬೆಂಗಳೂರು : ʻವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ” ರ ಭಾವಚಿತ್ರ ಅನಾವರಣ ಸಮಾರಂಭವನ್ನು ಜಿಲ್ಲಾ ಮತ್ತು ತಾಲ್ಲೂಕು ಮಟ್ಟಗಳಲ್ಲಿ ಆಯೋಜಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಸರ್ಕಾರದ ಸುತ್ತೋಲೆ ಸಂಖ್ಯೆ ಸಿಆಸುಇ 47 ರಾಸ 2024, ದಿನಾಂಕ:14.02.2024 ಸದರಿ ಸುತ್ತೋಲೆಯಲ್ಲಿ 12ನೇ ಶತಮಾನದಲ್ಲಿ ಕ್ರಾಂತಿಯೋಗಿ ಶ್ರೀ ಜಗಜ್ಯೋತಿ ಬಸವಣ್ಣನವರು ಪ್ರತಿಪಾದಿಸಿದ ಸಾರ್ವತ್ರಿಕ ಮೌಲ್ಯಗಳಾದ ಜಾತಿ ರಹಿತ ಸಮಾಜ, ಕಾಯಕದ ಮಹತ್ತ್ವ, ವರ್ಗರಹಿತ ಸಮಾಜ ಮತ್ತು ಜೀವನ ಮಾರ್ಗ ಸರ್ವಕಾಲಕ್ಕೂ ದಾರಿದೀಪವಾಗಿದೆ ಸಮಾಜದಲ್ಲಿ ಮಹಿಳಾ ಅಸಮಾನತೆ ಹಾಗೂ ಮೂಢನಂಬಿಕೆಗಳನ್ನು ವಿರೋಧಿಸುತ್ತಾ, ನಮ್ಮ ನಡೆ-ನುಡಿಗಳಲ್ಲಿ ಭಿನ್ನತೆ ಇರಬಾರದು ಎಂಬುದನ್ನು ಬಸವಣ್ಣನವರು ವಚನ ಮಾಧ್ಯಮದ ಮೂಲಕ ವ್ಯಕ್ತಪಡಿಸಿದ್ದಾರೆ. ವಿಶ್ವ ಸಂಸ್ಕೃತಿಯ ಉದಾತ್ತ ತತ್ವಗಳನ್ನು ಪ್ರತಿಪಾದಿಸಿದ ಬಸವಣ್ಣನವರೇ ನಮ್ಮ ನಿಜವಾದ ವಿಶ್ವಗುರುಗಳು, ನಾಡಿನ ಸಾಂಸ್ಕೃತಿಕ ನಾಯಕರು. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ಬಸವಣ್ಣನವರನ್ನು “ವಿಶ್ವಗುರು ಬಸವಣ್ಣ. ಸಾಂಸ್ಕೃತಿಕ ನಾಯಕ” ಎಂದು ಘೋಷಣೆ ಮಾಡಿ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಸನ್ಮಾನ್ಯ ಮುಖ್ಯಮಂತ್ರಿಗಳು ದಿನಾಂಕ:13.02.2024 ರಂದು ವಿಧಾನಸೌಧದಲ್ಲಿ ಅನಾವರಣಗೊಳಿಸಿರುತ್ತಾರೆ.
ದಿನಾಂಕ:17.02.2024 ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಸ್ಥಳೀಯ ಶಾಸಕರುಗಳ ನೇತೃತ್ವದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸಲು ಸೂಚಿಸಿ ಬಸವಣ್ಣನವರ ಭಾವಚಿತ್ರವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವೆಬ್‌ಸೈಟ್‌ನಲ್ಲಿದ್ದಂತೆ ಅನಾವರಣಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸಲು ಹಾಗೂ ಭಾವಚಿತ್ರವನ್ನು ಕಡ್ಡಾಯವಾಗಿ ಅಳವಡಿಸುವಂತೆ ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಿರುತ್ತಾರೆ.
ಸರ್ಕಾರದ ಸೂಚನೆಯಂತೆ ಶಾಲಾ ಶಿಕ್ಷಣ ಇಲಾಖೆಯ ಬೆಂಗಳೂರು ಆಯುಕ್ತಾಲಯ ವ್ಯಾಪ್ತಿಯ ಎಲ್ಲಾ ಕಛೇರಿಗಳಲ್ಲಿ ಶ್ರೀ ಬಸವಣ್ಣನವರ ಭಾವಚಿತ್ರದಲ್ಲಿ “ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ” ಎಂದು ಮುದ್ರಿಸಿ ಅಳವಡಿಸಿ ಉಲ್ಲೇಖಿತ ಸುತ್ತೋಲೆಯಂತೆ ಕ್ರಮವಹಿಸಲು ಸೂಚಿಸಿದೆ.
![](https://kannadadunia.com/wp-content/uploads/2024/02/WhatsApp-Image-2024-02-16-at-8.10.35-PM-1.jpeg)
![](https://kannadadunia.com/wp-content/uploads/2024/02/WhatsApp-Image-2024-02-16-at-8.10.35-PM.jpeg)