ಬಂಧಿತರನ್ನು ಈಗಲೇ ‘ಟೆರರಿಸ್ಟ್’ ಎಂದು ಹೇಳುವುದಕ್ಕೆ ಆಗಲ್ಲ : ಗೃಹ ಸಚಿವ ಡಾ ಜಿ.ಪರಮೇಶ್ವರ್

ಬೆಂಗಳೂರು : ಬಂಧಿತರನ್ನು ಈಗಲೇ ಟೆರರಿಸ್ಟ್ ಎಂದು ಹೇಳುವುದಕ್ಕೆ ಆಗಲ್ಲ ಎಂದು ಗೃಹ ಸಚಿವ ಡಾ ಜಿ.ಪರಮೇಶ್ವರ್ ಹೇಳಿದರು.

ವಿಧಾನಸೌಧದಲ್ಲಿ ಮಾತನಾಡಿದ ಗೃಹ ಸಚಿವ ಡಾ ಜಿ ಪರಮೇಶ್ವರ್ ಹೆಬ್ಬಾಳ ಠಾಣಾ ವ್ಯಾಪ್ತಿಯಲ್ಲಿ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ಮಾಡಿ ಟೆರರಿಸ್ಟ್ ಜೊತೆ ಲಿಂಕ್ ಇದೆಯಾ ಎಂದು ನೋಡುತ್ತಿದ್ದಾರೆ. ಕೆಲವು ಕೃತ್ಯವೆಸಗುವ ಬಗ್ಗೆ ಮಾಹಿತಿ ಸಿಕ್ಕಿದೆ. ಆಮೇಲೆ ಈ ಬಗ್ಗೆ ಸತ್ಯಾನುಸತ್ಯತೆ ಹೊರ ಬೀಳಲಿದೆ. ಪೊಲೀಸರ ತನಿಖೆ ಆಗಲಿ ಆಮೇಲೆ NIA ತನಿಖೆ ಬಗ್ಗೆ ನೋಡೋಣ ಎಂದು ಡಾ ಜಿ.ಪರಮೇಶ್ವರ್ ಹೇಳಿದರು. ಅವರು ಯಾವ ಸಂಘಟನೆ ಜತೆ ಗುರುತಿಸಿಕೊಂಡಿದ್ದರು ಎಂಬ ಬಗ್ಗೆ ತನಿಖೆಯಿಂದ ತಿಳಿಯಬೇಕಿದೆ ಎಂದರು.

ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಂಧಿಸಿ ಬೆಂಗಳೂರಿನ ಎನ್ ಐ ಎ ಕೋರ್ಟ್ ಗೆ ಹಾಜರುಪಡಿಸಿದೆ.ವಿಚಾರಣೆ ನಡೆಸಿದ ಎನ್ ಐ ಎ ವಿಶೇಷ ಕೋರ್ಟ್ ಐವರು ಶಂಕಿತ ಉಗ್ರರನ್ನು ಏಳು ದಿನಗಳ ಕಾಲ ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. 15 ದಿನ ತಮ್ಮ ವಶಕ್ಕೆ ನೀಡುವಂತೆ ಸಿಸಿಬಿ ಮನವಿ ಮಾಡಿಕೊಂಡಿತ್ತು, ಆದರೆ ಕೋರ್ಟ್ 7 ದಿನ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಬೆಂಗಳೂರಿನ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ 7 ಶಂಕಿತ ಉಗ್ರರ ಪೈಕಿ ಐವರನ್ನು ಬಂಧಿಸಿದ್ದು, ಇಬ್ಬರು ಪರಾರಿಯಾಗಿದ್ದಾರೆ. ಆರೋಪಿ ನಂಬರ್-1 ನಜೀರ್ ಹಾಗೂ ಆರೋಪಿ ನಂಬರ್ 2 ಸದ್ಯ ಪರಾರಿಯಾಗಿದ್ದು, 3 ಸುಹೇಲ್, 4 ಉಮರ್, 5, ಜಾಹೀದ್, 6 ಮುದಾಸಿರ್, ಫೈಜಲ್ ಆರೆಸ್ಟ್ ಆಗಿದ್ದಾರೆ.

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read