ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಆಗಮಿಸುವವರಿಗೆ ಸಸ್ಯಾಹಾರದ ಜೊತೆಗೆ ಮಾಂಸಾಹಾರವನ್ನು ನೀಡಬೇಕು ಎಂಬ ಚರ್ಚೆ ಜೋರಾಗಿ ನಡೆದಿದೆ. ಅಲ್ಲದೆ ಈ ಹಿಂದೆ ಮಾಂಸ ಆಹಾರದ ಸ್ಟಾಲ್ ಗೆ ನಿಷೇಧಿಸಿದ್ದ ಸುತ್ತೋಲೆಯನ್ನು ಒತ್ತಡಕ್ಕೆ ಮಣಿದು ಈಗ ಹಿಂಪಡೆಯಲಾಗಿದೆ.
ಇದೇ ಸಂದರ್ಭದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ಗೊ.ರು. ಚನ್ನಬಸಪ್ಪ, ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಯಾವ ರೀತಿಯ ಊಟ ಕೊಡಬೇಕು ಎಂಬುದು ಸಮ್ಮೇಳನ ಸ್ವಾಗತ ಸಮಿತಿ ಮತ್ತು ಆಹಾರ ಸಮಿತಿ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಚಿಕ್ಕಮಗಳೂರು ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು ಈ ಕುರಿತು ನಡೆಯುತ್ತಿರುವ ಚರ್ಚೆಗಳಿಗೆ ಪ್ರತಿಕ್ರಿಯೆಯಾಗಿ, ಯಾರದಾದರೂ ಮನೆಗೆ ನಾವುಗಳು ಹೋದಾಗ ಅದೇ ಬೇಕು, ಇದೇ ಬೇಕು ಎಂದು ಕೇಳಲಾಗುವುದಿಲ್ಲ. ಅವರು ಕೊಡುವುದನ್ನು ಊಟ ಮಾಡಬೇಕಾಗುತ್ತದೆ ಅಲ್ಲವೇ ಎಂದು ಕೇಳಿದರು.