
ಮಂಗಳೂರು: ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ವಿವಿಧ ಉದ್ಯಮಿಗಳ ಮನೆ, ಕಚೇರಿ, ಆಸ್ಪತ್ರೆಗಳ ಮೇಲೆ ದಾಳಿ ನಡೆಸಲಾಗಿದೆ.
ಮಂಗಳೂರು ನಗರದ ಎಜೆ ಆಸ್ಪತ್ರೆಯ ಎ.ಜೆ. ಶೆಟ್ಟಿ ಅವರ ಮನೆ, ದೇರಳಕಟ್ಟೆ ಯೆನೆಪೋಯಾ ಆಸ್ಪತ್ರೆಯ ಮಾಲೀಕರ ಬೈಂದೂರ್ ಮನೆ ಮೇಲೆ ದಾಳಿ ನಡೆಸಲಾಗಿದೆ. ಐಟಿ ಅಧಿಕಾರಿಗಳಿಂದ ಇಬ್ಬರು ಉದ್ಯಮಿಗಳ ಮನೆಯಲ್ಲಿ ಶೋಧ ನಡೆಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.