alex Certify BIG BREAKING: ಶಾಸಕ ಜಮೀರ್ ಅಹಮ್ಮದ್ ಗೆ ಬಿಗ್ ಶಾಕ್, ಬೆಳ್ಳಂಬೆಳಗ್ಗೆ ಐಟಿ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಶಾಸಕ ಜಮೀರ್ ಅಹಮ್ಮದ್ ಗೆ ಬಿಗ್ ಶಾಕ್, ಬೆಳ್ಳಂಬೆಳಗ್ಗೆ ಐಟಿ ದಾಳಿ

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಐಟಿ ದಾಳಿ ನಡೆಸಲಾಗಿದೆ. ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕಂಟೋನ್ಮೆಂಟ್ ಬಳಿ ಇರುವ ಜಮೀರ್ ಅಹ್ಮದ್ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಆದಾಯ ಆಸ್ತಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಲಾಗಿದೆ.

ಇತ್ತೀಚೆಗಷ್ಟೇ ಜಮೀರ್ ಅಹ್ಮದ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಜಮೀರ್ ಅಹಮದ್ ಗೆ ಸಂಬಂಧಿಸಿದ ಕಚೇರಿ, ಮನೆ ಹಾಗೂ ಫ್ಲಾಟ್ ಗಳ ಮೇಲೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ಆದಾಯ ವಿವರ, ಹೂಡಿಕೆ, ಸಂಪಾದನೆ, ಆಸ್ತಿ ಮೊದಲಾದ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಪೊಲೀಸ್ ಭದ್ರತೆಯೊಂದಿಗೆ ಏಕಕಾಲದಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...