ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಣಿಪಾಲ್ ಸಮೂಹ ಸಂಸ್ಥೆಗಳು ಸೇರಿದಂತೆ ದೇಶದ ಹಲವೆಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಬಳಿ ಇರುವ ಮಣಿಪಾಲ್ ಆಸ್ಪತ್ರೆ ಸೇರಿದಂತೆ ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ ಮುಂಜಾನೆಯಿಂದಲೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.
ದೇಶಾದ್ಯಂತ ಒಟ್ಟು 50 ಕಡೆಗಳಲ್ಲಿ ಐಟಿ ಅಧಿಖಾರಿಗಳು ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.