alex Certify ಕೋತಿಗಳಿಂದ ತಪ್ಪಿಸಿಕೊಳ್ಳಲು ಓಡಿದ ವಿದ್ಯಾರ್ಥಿನಿ ದಾರುಣ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋತಿಗಳಿಂದ ತಪ್ಪಿಸಿಕೊಳ್ಳಲು ಓಡಿದ ವಿದ್ಯಾರ್ಥಿನಿ ದಾರುಣ ಸಾವು

ತೆಲಂಗಾಣದ ವಾರಂಗಲ್ ಜಿಲ್ಲೆಯಲ್ಲಿ ಕೋತಿಗಳಿಂದ ತಪ್ಪಿಸಿಕೊಳ್ಳಲು ಓಡಿದ ವಿದ್ಯಾರ್ಥಿನಿ ಆಯತಪ್ಪಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಮೃತಪಟ್ಟಿದ್ದಾರೆ.

ಎಂಸಿಎ ಓದುತ್ತಿರುವ ಶಿರೀಶಾ ಮೃತಪಟ್ಟ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. ವಾರಂಗಲ್ ನ ಬಟುಪಲ್ಲಿಯಲ್ಲಿ ವೃತ್ತಿಪರ ಕೌಶಲ್ಯ ತರಬೇತಿ ಪಡೆದುಕೊಳ್ಳಲು ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದ ಶಿರೀಶಾ ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಕೋತಿಗಳು ದಾಳಿ ಮಾಡಿವೆ.

ಭಯಗೊಂಡ ಆಕೆ ಅವುಗಳಿಂದ ತಪ್ಪಿಸಿಕೊಳ್ಳಲು ಓಡಿದ್ದು  ಆಯತಪ್ಪಿ ಕಟ್ಟಡದ ಮೇಲಿಂದ ಕೆಳಗೆ ಬಿದ್ದಿದ್ದಾರೆ. ತಲೆಗೆ ಗಂಭೀರವಾದ ಪೆಟ್ಟಾಗಿ ಸಾವನ್ನಪ್ಪಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...