alex Certify ಕಲ್ಮಶ ಕಳೆದು ಅಪರಂಜಿ ಆಗಿ ಬರಲು ಸಮಯ ಬೇಕು.. ಕಾಯೋಣ..! : ನಟ ದರ್ಶನ್ ಪರ ಗಾಯಕಿ ‘ಶಮಿತಾ ಮಲ್ನಾಡ್’ ಪೋಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲ್ಮಶ ಕಳೆದು ಅಪರಂಜಿ ಆಗಿ ಬರಲು ಸಮಯ ಬೇಕು.. ಕಾಯೋಣ..! : ನಟ ದರ್ಶನ್ ಪರ ಗಾಯಕಿ ‘ಶಮಿತಾ ಮಲ್ನಾಡ್’ ಪೋಸ್ಟ್

ಬೆಂಗಳೂರು : ಕಲ್ಮಶ ಕಳೆದು ಅಪರಂಜಿ ಆಗಿ ಬರಲು ಸಮಯ ಬೇಕು..ಕಾಯೋಣ..! ಹೀಗಂತ ನಟ, ಆರೋಪಿ ದರ್ಶನ್ ಪರ ಗಾಯಕಿ ಶಮಿತಾ ಮಲ್ನಾಡ್ ಪೋಸ್ಟ್ ಹಂಚಿಕೊಂಡಿದ್ದಾರೆ.

ಏನಿದೆ ಶಮಿತಾ ಮಲ್ನಾಡ್ ಪೋಸ್ಟ್ ನಲ್ಲಿ..?

ಮನಸೇ ಮನಸೇ,,,
ಸೋಲೋ ಗೆಲುವೋ, ನೋವೋ ನಲಿವೋ
ಏಳೋ ಬೀಳೋ,,ಕಲ್ಲೋ ಮುಳ್ಳೋ
ಜೀವನದ ಹಾದಿ ಸುಲಭವಲ್ಲ..
ಯಶಸ್ಸಿನ ಹಾದಿ ಸುಗಮವಲ್ಲ… ಹಸಿವು, ಅವಮಾನ, ನೋವುಂಡು ಯಶಸ್ಸು ಗಳಿಸಿದ ಹೆಸರು
ದರ್ಶನ್ ತೂಗುದೀಪ.. Darshan Thoogudeepa Srinivas
ಸಹಚರ, ಗೆಳೆಯ, ಸೋದರ, ಎಷ್ಟೋ ಜನರಿಗೆ ಸಹಾಯ ಹಸ್ತ ನೀಡಿ ಜೀವನವಾಗಿದ್ದವರು, ಒಳ್ಳೆ ಕೆಲಸಗಳಿಗೆ ಕೈ ಚಾಚಿದ್ದವರು,,ಜಾರಿ ಬಿದ್ದಾಗ ಆಳಿಗೊಂದು ಕಲ್ಲಾಗೋದು ಬೇಡಾ….
ಅವರ ಅಭಿನಯ, ಭೇದವಿಲ್ಲದ ಪ್ರೀತಿ, ಸರಳತೆ, ಸ್ನೇಹ ಅಭಿಮಾನದ ಸಿಹಿ ಉಂಡವರು ನಾವು, ಅಭಿಮಾನಿಯಾಗಿ ಸಿನಿಮಾ ಅಭಿನಯ ನೋಡಿ ಅತ್ತು, ನಕ್ಕು, ಚಪ್ಪಾಳೆ ಶಿಳ್ಳೆ ಹೊಡೆದು ಸಂಭ್ರಮಿಸಿದವರು ನಾವು,, ಆರಡಿ ದೇಹವ ಮೂರಡಿ ಬಗ್ಗಿಸಿ ತಗ್ಗಿ ನಮ್ಮೊಂದಿಗೆ ವಿನಯದಿ ಮಾತಾಡುವಾಗ ಹೆಮ್ಮೆ ಪಟ್ಟವರು ನಾವು,,, ತಪ್ಪಾಗಿದೆಯೋ ಇಲ್ಲವೋ ಏನಾಗಿದೆ ಎಂದು ಅರಿಯದವರು ನಾವು..ಹಣಕ್ಕೆ ಬಗ್ಗದೆ ಪ್ರೀತಿಗೆ ಬಗ್ಗಿದವರು ಅವರು,,,
ತಪ್ಪಾಗಿದ್ದರೆ ನ್ಯಾಯಾಂಗವಿದೆ, ಕಾನೂನಿದೆ,,,ಶಿಕ್ಷೆ ಇದೇ..ಅಕಾಲ ನಿಧನರಾದ ಶ್ರೀ ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ,,, ಅವರ ಕುಟುಂಬ ಹಾಗೂ ಹಲವು ನೊಂದ ಕುಟುಂಬಗಳಿಗೆ ನಮ್ಮೆಲ್ಲರ ಸಾಂತ್ವನ ,, ನೆರವು, ಆಸರೆ, ನ್ಯಾಯ ಬೇಕಿದೆ,,ಹಾಗೆ ಸೋಶಿಯಲ್ ಮೀಡಿಯಾವನ್ನು ದಯವಿಟ್ಟು ಒಳಿತಿಗೆ ಉಪಯೋಗಿಸಿ,, ಎಲ್ಲರ ಮೇಲೆ ಗೌರವವಿರಲಿ,, ಕಾಮೆಂಟ್ಸ್, ಪೋಸ್ಟ್, ಮೇಲೆ ಹಿಡಿತವಿರಲಿ,,ದರ್ಶನ್ ಅಣ್ಣಾ,, ಕನ್ನಡದ ಕುಟುಂಬ,, ಚಲನಚಿತ್ರದ ಕುಟುಂಬ ನಮ್ಮ ಕುಟುಂಬ,, ಕಲಾವಿದರ ಕುಟುಂಬ,, ಏನೇ ಆದರೂ ನಮ್ಮ ಮನೆಯವರ ಜೊತೆ ನಾವು ಯಾವಾಗ್ಲೂ ಜೊತೆ ಇರುತ್ತೇವೆ,, ಅಲ್ಲವೇ??? ಹಾಗೆ ಪ್ರೀತಿ ಅಭಿಮಾನ ಬದಲಾಗದು,, ತಪ್ಪು ಯಾರು ಮಾಡಿದ್ದರೂ ಶಿಕ್ಷೆ ಆಗಬೇಕು .. ನ್ಯಾಯ ಎಲ್ಲರಿಗೂ ಒಂದೇ,,,

ದರ್ಶನ್ ಅವರನ್ನು ಪ್ರೀತಿಸುವ ಎಲ್ಲರಿಗೂ ನೋವಾಗಿದೆ,,ಸಂಕಟವಾಗಿದೆ,,ಇದು ಸಂಯಮ, ತಾಳ್ಮೆ, ಪ್ರಾರ್ಥನೆಯ ಸಮಯ,,ಸಿಟ್ಟು, ಕೋಪ, ಅಸಹನೆ, ಹತಾಶೆ ದರ್ಶನ್ ಹಾಗೂ ಅವರ ಕುಟುಂಬಕ್ಕೆ ಇನ್ನಷ್ಟು ತೊಂದರೆ ಒಡ್ಡಬಹುದು,,ಚಿನ್ನ ಕುದಿವ ಕುಲುಮೆಯಲ್ಲಿದೆ,ಕಲ್ಮಶ ಕಳೆದು ಅಪರಂಜಿ ಆಗಿ ಶುದ್ಧವಾಗಿ ಬರಲು ಸಮಯ ಬೇಕು,,,ಕಾಯೋಣ ,, ಸಮಾಧಾನದಿಂದದರ್ಶನ್ ಅಣ್ಣಾ ಅವರಿಗಾಗಿ  ಪ್ರಾರ್ಥಿಸೋಣ, ಹಾರೈಸೋಣ… ಎಂದು  ಶಮಿತಾ ಮಲ್ನಾಡ್  ಫೇಸ್  ಬುಕ್ ನಲ್ಲಿ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...