ನವದೆಹಲಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಇಂದು ದೆಹಲಿಗೆ ಭೇಟಿ ನೀಡಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ.
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ , ಮಾಜಿ ಸಚಿವ ರೇವಣ್ಣ ಅವರು ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಇಂದು ದೆಹಲಿಗೆ ಭೇಟಿ ನೀಡಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿರುವುದು ಬಹಳ ಕುತೂಹಲ ಮೂಡಿದೆ.
ಭಾರತಾಂಬೆಯ ಮಹಾನ್ ಸುಪುತ್ರನ ದರ್ಶನ ಪಡೆದ ಅನುಭವವಾಯಿತು : ಬಿ.ವೈ ವಿಜಯೇಂದ್ರ
ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ನೆಚ್ಚಿನ ಪ್ರಧಾನಿ ಮೋದಿ ಅವರನ್ನು ಇಂದು ಭೇಟಿಯಾಗಿ ಆಶೀರ್ವಾದ ಪಡೆದ ಸಂದರ್ಭ ಸಂತ ತೇಜಸ್ಸಿನ ಭಾರತಾಂಬೆಯ ಮಹಾನ್ ಸುಪುತ್ರನ ದರ್ಶನ ಪಡೆದ ಅನುಭವವಾಯಿತು. ರಾಷ್ಟ್ರ ಭಕ್ತಿ, ಸಂಘ ನಿಷ್ಠೆ, ಸಮರ್ಪಣೆ, ಶಿಸ್ತು, ಬದ್ಧತೆ, ಕ್ರಿಯಾಶೀಲತೆ, ಸಾಧಿಸುವ ಛಲದ ಗುರಿ ಇವೆಲ್ಲಕ್ಕೂ ಭಾರತದ ಇತಿಹಾಸದಲ್ಲಿ ಉದಾಹರಿಸಬಲ್ಲ ಏಕೈಕ ವ್ಯಕ್ತಿತ್ವ ಮಾನ್ಯ ಮೋದಿ ಜೀ ಅವರದು, ಅವರ ಸ್ವಾವಲಂಬಿ ಹಾಗೂ ಬಲಿಷ್ಠ ಭಾರತ ಕಟ್ಟುವ ಮಹಾನ್ ಸಂಕಲ್ಪ ಪರಿಪೂರ್ಣವಾಗಿ ಈಡೇರಿದರೆ ವಿಶ್ವಮಟ್ಟದಲ್ಲಿ ನಮ್ಮ ಭವ್ಯ ಭಾರತ ಅಗ್ರಸ್ಥಾನದಲ್ಲಿ ನಿಲ್ಲಲಿದೆ.
ಈ ನಿಟ್ಟಿನಲ್ಲಿ ಅವರೊಂದಿಗೆ ಹೆಗಲು ಕೊಡುವ ಪುಣ್ಯದ ಕಾರ್ಯದಲ್ಲಿ ಸಮರ್ಪಿಸಿಕೊಳ್ಳಲು ‘ಬಿಜೆಪಿ-ಕರ್ನಾಟಕ’ದ ರಥ ಮುನ್ನಡೆಸುವ ಜವಾಬ್ದಾರಿ ವಹಿಸಿಕೊಟ್ಟಿರುವುದು ನನ್ನ ಸೌಭಾಗ್ಯ ಎಂಬುದು ನನ್ನ ವಿನಮ್ರ ಭಾವವಾಗಿದೆ. 2024 ರ ಮಹಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಮೋದಿ ಜೀ ಅವರ ಮಡಿಲಿಗೆ ಸಮರ್ಪಿಸಬೇಕೆಂಬ ನನ್ನ ಹೆಗ್ಗುರಿಯ ಹೆಜ್ಜೆಗೆ ಇಂದಿನ ಭೇಟಿಯ ಅವರ ಪ್ರೇರಣೆಯ ಮಾತುಗಳು ನನ್ನಲ್ಲಿ ಅದಮ್ಯ ಆತ್ಮ ವಿಶ್ವಾಸ ಮೂಡಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.