ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿದ್ದು ಒಬ್ಬರಲ್ಲ ಇಬ್ಬರು ಎಂಬ ಸ್ಪೋಟಕ ಮಾಹಿತಿ ಬಯಲಾಗಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇದೀಗ ಬಾಂಬ್ ಸ್ಪೋಟಿಸಿದ್ದು, ಒಬ್ಬರಲ್ಲ ಇಬ್ಬರು ಎಂಬ ಮಾಹಿತಿ ಕಲೆಹಾಕಿದ್ದು, ಸಿಸಿಟಿವಿಯಲ್ಲಿ ಮತ್ತೋರ್ವ ಶಂಕಿತನ ಚಲನವಲನಗಳನ್ನು ಪತ್ತೆ ಹಚ್ಚಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣವನ್ನು ಎನ್ ಐ ಎ ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದೆ. ಶಂಕಿತ ಆಂಧ್ರಪ್ರದೇಶದ ತಿರುಪತಿ ಅಥವಾ ಹೈದ್ರಾಬಾದ್ನಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಇದ್ದು, ಆತನ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.