alex Certify BIG NEWS : ನಮ್ಮ ‘ಗ್ಯಾರಂಟಿ ಯೋಜನೆ’ಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರೇ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿದ್ದಾರೆ : CM ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ನಮ್ಮ ‘ಗ್ಯಾರಂಟಿ ಯೋಜನೆ’ಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರೇ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿದ್ದಾರೆ : CM ಸಿದ್ದರಾಮಯ್ಯ

ಬೆಂಗಳೂರು : ನಮ್ಮ ‘ಗ್ಯಾರಂಟಿ ಯೋಜನೆ’ಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರೇ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪ್ರೆಸ್ ಕ್ಲಬ್ ಆಫ್ ಬೆಂಗಳೂರಿನ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಎಲ್ಲಾ ಆರೋಗ್ಯಕರ ಟೀಕೆಗಳನ್ನು ಸ್ವಾಗತಿಸುತ್ತೇನೆ, ತಿದ್ದಿಕೊಳ್ಳುತ್ತೇನೆ. ಆದರೆ ರಾಜಕೀಯ ಕಾರಣಕ್ಕೆ ಸುಳ್ಳು ಸುಳ್ಳೇ ಟೀಕಿಸಿದರೆ ಐ ಡೋಂಟ್ ಕೇರ್. ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರೇ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿದ್ದಾರೆ. ನಮ್ಮ ಗ್ಯಾರಂಟಿಗಳನ್ನು ಬೇರೆ ಹೆಸರಲ್ಲಿ ಅವರು ಘೋಷಿಸಿದ್ದಾರೆ. ಆದರೂ ಮಹಾರಾಷ್ಟ್ರ ಚುನಾವಣೆ ವೇಳೆ ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿಯೇ ಆಗಿಲ್ಲ ಎಂದು ಸುಳ್ಳು ಜಾಹೀರಾತು ನೀಡಿದರು. ಇವತ್ತು “ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿದೆ. ಇದು ಅಪಾಯಕಾರಿ ಬೆಳವಣಿಗೆ.

ನಾನು ಇವತ್ತಿನವರೆಗೂ ಯಾವ ಮಾಧ್ಯಮದವರಿಗೂ ಯಾಕೆ ಹೀಗೆ ಬರೆದ್ರಿ ಎಂದು ಕೇಳಿಲ್ಲ. ಆದರೆ ನೀವು ಜನರ ಧ್ವನಿಯಾಗಿ ಕೆಲಸ ಮಾಡಬೇಕು. ಸಾಧ್ಯವಾದಷ್ಟು ಸತ್ಯ ಬರೆಯೋಕೆ ಟ್ರೈ ಮಾಡಿ ನೋಡೋಣ. ಮನಸಾಕ್ಷಿಗೆ ತಕ್ಕಂತೆ ಮಾಧ್ಯಮಗಳು ವರದಿ ಮಾಡಿದರೆ ಸಮಾಜಕ್ಕೆ ಅದಕ್ಕಿಂತ ದೊಡ್ಡ ಸೇವೆ ಇಲ್ಲ. ಸುದ್ದಿಗಳನ್ನು ವೈಭವೀಕರಿಸುವುದು, ಮೂಢ ನಂಬಿಕೆಗಳನ್ನು ಬೆಂಬಲಿಸೋಕೆ ಹೋಗಬೇಡಿ. ನನ್ನ ಕಾರಿನ ಮೇಲೆ ಕಾಗೆ ಕುಳಿತಿದ್ದಕ್ಕೆ ಜ್ಯೋತಿಷಿಗಳನ್ನು ಚಾನಲ್ ಗಳಿಗೆ ಕರೆಸಿ ಏನೆಲ್ಲಾ ಹೇಳಿಸಿದಿರಿ. ನಾನು 5 ವರ್ಷ ಮುಖ್ಯಮಂತ್ರಿಯಾಗಿ ಪೂರ್ಣಗೊಳಿಸಲ್ಲ ಎಂದು ತೋರಿಸಿದಿರಿ. ಆದರೆ ನಾನು ಐದು ವರ್ಷ ಪೂರೈಸಿ ಎರಡನೇ ಬಾರಿ ಸಿಎಂ ಆದೆ.
ಈಗ ಹೇಳಿ ಕಾಗೆ ಸುದ್ದಿಯಿಂದ ಮಾಧ್ಯಮಗಳ ವಿಶ್ವಾಸಾರ್ಹತೆ ಕಡಿಮೆ ಆಯ್ತೋ ಇಲ್ಲವೋ? ನಾವು ಜನಪರ ಕೆಲಸ ಮಾಡದಿದ್ದಾಗ, ಕೊಟ್ಟ ಮಾತು ಈಡೇರಿಸದಿದ್ದಾಗ ಅದನ್ನು ಬರೆದು ಜನರ ಕಣ್ಣು ತೆರೆಸುವ ಹಕ್ಕು ಜವಾಬ್ದಾರಿ ಮಾಧ್ಯಮದವರ ಮೇಲಿದೆ. ಅದನ್ನು ನೀವೆಲ್ಲರೂ ನಿಭಾಯಿಸಬೇಕು. ನಾವು ಊಟಕ್ಕೆ ಸೇರಿ ಏನೋ ಮಾತಾಡಿರ್ತೀವಿ. ಆದರೆ ಮಾಧ್ಯಮಗಳೇ ಡೈಲಾಗ್ ಬರೆದು ಬಿಡ್ತಾರೆ. ನಮಗೆ ಗೊತ್ತೇ ಇರದ ವಿಷಯವನ್ನು ಅವರೇ ಡೈಲಾಗ್ ಬರೆದು ತೋರಿಸಿದ್ದಾರೆ. ಬುದ್ಧ, ಬಸವ, ಅಂಬೇಡ್ಕರ್ ಹೇಳಿದ ಸಮ ಸಮಾಜದ ಆಶಯ ಈಡೇರಿಸುವ ದಿಕ್ಕಿನಲ್ಲಿ ವೃತ್ತಿಪರತೆ ನಿರ್ವಹಿಸಿದರೆ ಅದು ಸಮಾಜಕ್ಕೆ ಉಪಯೋಗವಾಗುತ್ತದೆ. ಪ್ರಶಸ್ತಿ ವಿಜೇತ ಪತ್ರಕರ್ತರಿಗೆ ಅಭಿನಂದನೆಗಳು. ಪ್ರಶಸ್ತಿ ಪುರಸ್ಕೃತರು ಇನ್ನಷ್ಟು ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಆಶಿಸುತ್ತೇನೆ ಎಂದಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...