alex Certify ಐಟಿ, ಬಿಟಿ ಉದ್ಯೋಗಿಗಳಿಗೆ ಕೆಲಸದ ಅವಧಿ 14 ಗಂಟೆಗೆ ವಿಸ್ತರಣೆ: ಕಾರ್ಮಿಕ ಇಲಾಖೆಯಿಂದ ಅಭಿಪ್ರಾಯ ಸಂಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಟಿ, ಬಿಟಿ ಉದ್ಯೋಗಿಗಳಿಗೆ ಕೆಲಸದ ಅವಧಿ 14 ಗಂಟೆಗೆ ವಿಸ್ತರಣೆ: ಕಾರ್ಮಿಕ ಇಲಾಖೆಯಿಂದ ಅಭಿಪ್ರಾಯ ಸಂಗ್ರಹ

ಬೆಂಗಳೂರು: ಐಟಿ ಬಿಟಿ ಕಂಪನಿಗಳ ಉದ್ಯೋಗಿಗಳಿಗೆ ಕೆಲಸದ ಅವಧಿ 14ಗೆ ಗಂಟೆ ವಿಸ್ತರಿಸಬೇಕೆಂದು ಉದ್ಯಮಿಗಳು ರಾಜ್ಯ ಸರ್ಕಾರದ ಮುಂದೆ ಪ್ರಸ್ತಾಪ ಇಟ್ಟಿದ್ದ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘಟನೆಗಳ ಅಭಿಪ್ರಾಯ ಸಂಗ್ರಹಿಸಲು ಕಾರ್ಮಿಕ ಇಲಾಖೆ ಮುಂದಾಗಿದೆ.

ಕೆಲಸದ ಅವಧಿಯನ್ನು 14 ಗಂಟೆಗೆ ವಿಸ್ತರಿಸಲು ಅನುಕೂಲವಾಗುವಂತೆ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸ್ಥಾಪನೆ ಕಾಯ್ದೆ -1961 ಕ್ಕೆ ತಿದ್ದುಪಡಿ ತರಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಸರ್ಕಾರದ ಸೂಚನೆಯಂತೆ ಕಾರ್ಮಿಕ ಇಲಾಖೆ ಐಟಿ, ಬಿಟಿ ಕಂಪನಿಗಳಷ್ಟೇ ಅಲ್ಲ, ಖಾಸಗಿ ಸಂಸ್ಥೆಗಳ ಕಾರ್ಮಿಕ ಸಂಘಟನೆಗಳು, ಉದ್ಯೋಗದಾತರ ಅಭಿಪ್ರಾಯವನ್ನು ಕೇಳಲು ತೀರ್ಮಾನಿಸಿದೆ.

ಈಗಾಗಲೇ ಕಾರ್ಮಿಕ ಸಂಘಟನೆಗಳಿಂದ ಕೆಲಸದ ಅವಧಿ ಹೆಚ್ಚಳ ಮಾಡುವುದಕ್ಕೆ ಭಾರಿ ವಿರೋಧ ವ್ಯಕ್ತವಾಗಿದೆ. ಕೆಲಸದ ಅವಧಿಯನ್ನು 8 ಗಂಟೆಯಿಂದ 12 ಗಂಟೆಗೆ ಹೆಚ್ಚಿಸಿರುವುದೇ ಕಾರ್ಮಿಕ ವಿರೋಧಿ ನೀತಿಯಾಗಿದೆ. ಅದನ್ನು ಮತ್ತೆ ಎರಡು ತಾಸು ಹೆಚ್ಚಳ ಮಾಡಿದ್ದಲ್ಲಿ ಜೀವ ವಿರೋಧಿ ನೀತಿಯಾಗುತ್ತದೆ. ಹೆಚ್ಚುತ್ತಿರುವ ಕೆಲಸದ ಅವಧಿ, ಒತ್ತಡ, ದೈಹಿಕ ಚಟುವಟಿಕೆ ಕೊರತೆಯಿಂದ ಯುವ ಜನಾಂಗ ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ಕೆಲಸದ ಅವಧಿ ಜಾಸ್ತಿ ಮಾಡಿದರೆ ಮತ್ತಷ್ಟು ವಿಪರೀತ ಒತ್ತಡಕ್ಕೆ ಉದ್ಯೋಗಿಗಳು ಸಿಲುಕುತ್ತಾರೆ ಎಂದು ಕಾರ್ಮಿಕ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

ವಾರದಲ್ಲಿ ನಾಲ್ಕು ದಿನವಷ್ಟೇ ಉದ್ಯೋಗಿಗಳು ಕಾರ್ಯನಿರ್ವಹಿಸಿ ಉಳಿದ ಮೂರು ದಿನ ರಜೆಯಲ್ಲಿ ಕುಟುಂಬದೊಂದಿಗೆ ಕಾಲ ಕಳೆಯಬಹುದು. ಇದರಿಂದ ಉದ್ಯೋಗಿಗಳಿಗೆ ಪ್ರಯಾಣ ವೆಚ್ಚ, ಸಮಯ ಉಳಿತಾಯವಾಗುತ್ತದೆ ಎಂಬುದು ಉದ್ಯಮಿಗಳ ಅಭಿಪ್ರಾಯವಾಗಿದೆ.

ಕೆಲಸದ ಅವಧಿ ವಿಸ್ತರಿಸುವ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲು ಕಿದ್ವಾಯಿ ಆಸ್ಪತ್ರೆ ಸಮೀಪದ ಸಂಭ್ರಮ ಸಭಾಂಗಣದಲ್ಲಿ ಅಕ್ಟೋಬರ್ 8ರಂದು ಕಾನೂನು ಅರಿವು ಕಾರ್ಯಕ್ರಮವನ್ನು ಕಾರ್ಮಿಕ ಇಲಾಖೆ ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ಕೆಲಸದ ಅವಧಿ ವಿಸ್ತರಣೆ ಸಂಬಂಧ ಅಭಿಪ್ರಾಯ ಸಂಗ್ರಹಿಸಿ ಇದನ್ನು ಆಧರಿಸಿ ಸರ್ಕಾರ ನಿಯಮಾವಳಿ ರೂಪಿಸಲಿದೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...