alex Certify ಐಟಿಸಿ ಕಂಪನಿಯ ನಕಲಿ ಸಿಗರೇಟ್, ಹನ್ಸ್ ಮಾರಾಟ: ಸಿಸಿಬಿ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಟಿಸಿ ಕಂಪನಿಯ ನಕಲಿ ಸಿಗರೇಟ್, ಹನ್ಸ್ ಮಾರಾಟ: ಸಿಸಿಬಿ ದಾಳಿ

ಮೈಸೂರು: ಐಟಿಸಿ ಕಂಪನಿಯ ಸಿಗರೇಟ್ ಮತ್ತು ಉತ್ಪನ್ನಗಳನ್ನು ಕಂಪನಿಯ ಹಕ್ಕು ಸ್ವಾಮ್ಯತೆ ಉಲ್ಲಂಘಿಸಿ ನಕಲಿ ಉತ್ಪನ್ನಗಳನ್ನು ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ಫ್ಯಾಕ್ಟರಿ ಹಾಗೂ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿಯ ಸಂದರ್ಭದಲ್ಲಿ 70 ಲಕ್ಷ ರೂಪಾಯಿ ಮೌಲ್ಯದ ನಕಲಿ ಉತ್ಪನ್ನ ವಶಕ್ಕೆ ಪಡೆಯಲಾಗಿದೆ. ಐಟಿಸಿ ಕಂಪನಿಯ ಉತ್ಪನ್ನಗಳನ್ನು ಅಕ್ರಮವಾಗಿ ತಯಾರಿಸಿ ಮಾರಾಟ ಮಾಡುತ್ತಿರುವುದಾಗಿ ಕಂಪನಿಯ ಅಧಿಕಾರಿಗಳು ನೀಡಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಗಿದೆ.

ಜುಲೈ 22ರಂದು ಮೈಸೂರು ಇಟ್ಟಿಗೆಗೂಡಿನ ಅರುಣಾಚಲಂ ಸ್ಟ್ರೀಟ್ ನಲ್ಲಿರುವ ಮನೆಯೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು,  ನಕಲಿ ಉತ್ಪನ್ನಗಳನ್ನು ಮತ್ತು ಒಬ್ಬ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಆತನ ವಿಚಾರಣೆ ನಡೆಸಿದಾಗ ಹೆಚ್ಚಿನ ಮಾಹಿತಿ ಗೊತ್ತಾಗಿದೆ. ನಂಜನಗೂಡು ರಿಂಗ್ ರಸ್ತೆ ಬಳಿ ನಕಲಿ ಹನ್ಸ್ ಮತ್ತೊಬ್ಬ ಆರೋಪಿ ಮತ್ತು ತಂಬಾಕು ತಯಾರಿಸುತ್ತಿದ್ದ ಕೋಟೆಹುಂಡಿ ಫ್ಯಾಕ್ಟರಿ ಮೇಲೆ ದಾಳಿ ನಡೆಸಿ ಮತ್ತಿಬ್ಬರು ಆರೋಪಿಗಳು ಸೇರಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...