ಕಲಬುರಗಿ: ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‍ನ ಟೆಕ್ನಿಕಲ್ ಟ್ರೇನಿಂಗ್ ಇನ್ ಸ್ಟಿಟ್ಯೂಟ್‍ನಲ್ಲಿ ಫಿಟ್ಟರ್, ಟರ್ನರ್, ಮಶಿನಿಸ್ಟ್, ಎಲೆಕ್ಟ್ರಿಷಿಯನ್, ವೆಲ್ಡರ್, ಕೋಪಾ, ಕಾರ್ಪೆಂಟರ್, ಫೌಂಡ್ರಿಮನ್ ಹಾಗೂ ಶೀಟ್ ಮೇಟಲ್ ವರ್ಕ್ ಟ್ರೇಡ್‍ಗಳಲ್ಲಿ ಐ.ಟಿ.ಐ. ಪಾಸಾದ ವಿದ್ಯಾರ್ಥಿಗಳಿಗೆ ಅಪ್ರೆಂಟಿಸ್ ತರಬೇತಿ ನೀಡಲಾಗುವುದು.
ಇದಕ್ಕಾಗಿ ಕಲಬುರಗಿ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಪ್ರೆಂಟಿಸ್ ತರಬೇತಿ ಪಡೆಯಲಿಚ್ಛಿಸುವ ಅಭ್ಯರ್ಥಿಗಳು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿ ನಮೂನೆ ಪಡೆದು www.apprenticeship.gov.in ವೈಬ್‍ಸೈಟ್‍ನಲ್ಲಿ ನೋಂದಾಯಿಸಿಕೊಳ್ಳಬೇಕು.
ವೆಬ್ ಪೋರ್ಟಲ್ ಸಂಖ್ಯೆಯೊಂದಿಗೆ ಭರ್ತಿ ಮಾಡಿದ ಅರ್ಜಿಯೊಂದಿಗೆ ಎನ್.ಸಿ.ವಿ.ಟಿ. ಎಂ.ಐ.ಎಸ್. ಪೋರ್ಟಲ್ ನೋಂದಣಿ ಸಂಖ್ಯೆ, ಎಸ್.ಎಸ್.ಎಲ್.ಸಿ. ಹಾಗೂ ಐ.ಟಿ.ಐ ಪಾಸಾದ ಅಂಕಪಟ್ಟಿ, ಆಧಾರ್ ಕಾರ್ಡ್ ಹಾಗೂ ಮೀಸಲಾತಿ ಬಯಸಿದ್ದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಓಬಿಸಿ, ಅಂಗವಿಕಲ ಮತ್ತು ಆಮ್ರ್ಡ ಪೋರ್ಸ್(Armed Force) ಪ್ರಮಾಣ ಪತ್ರ ಹೊಂದಿದ್ದಲ್ಲಿ ಅರ್ಜಿಯೊಂದಿಗೆ ಇತ್ತೀಚಿನ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಕಲಬುರಗಿ ಎಂ.ಎಸ್.ಕೆ.ಮಿಲ್ ರಸ್ತೆಯಲ್ಲಿರುವ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ 2020ರ ಡಿಸೆಂಬರ್ 9 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ವೈಬ್ ಸೈಟ್ www.apprenticeship.gov.in ನ್ನು ಹಾಗೂ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.