
ಶಿವಮೊಗ್ಗ: ತುಂಗಭದ್ರಾ ಸಂಗಮದಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಕೂಡಲಿಯಲ್ಲಿ ನಡೆದಿದೆ.
18 ವರ್ಷದ ಮುಬಾರಕ್ ಮೃತ ವಿದ್ಯಾರ್ಥಿ. ಶಿವಮೊಗ್ಗದ ಅಣ್ಣಾನಗರದ ನಿವಾಸಿ. ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ.
ಸ್ನೇಹಿತರೊಂದಿಗೆ ಕೂಡಲಿಯ ತುಂಗಭದ್ರಾ ಸಂಗಮದಲ್ಲಿ ಸ್ನಾನಕ್ಕೆಂದು ನೀರಿಗಿಳಿದಿದ್ದಾನೆ. ಈ ವೇಳೆ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಹೊಳೆ ಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.