ಕೊಪ್ಪಳ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕೊಪ್ಪಳ ಇಲ್ಲಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈ.ಲಿ. ಬೆಂಗಳೂರು ರವರ ವತಿಯಿಂದ ಹಿಂದಿನ ವರ್ಷಗಳಲ್ಲಿ ಐಟಿಐ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಹಾಗೂ ಪ್ರಸ್ತುತ ಸಾಲಿನ ಅಂತಿಮ ವರ್ಷದ ಐಟಿಐ(ಎನ್ಸಿವಿಟಿ/ಎಸ್ಸಿವಿಟಿ) ವಿದ್ಯಾರ್ಥಿಗಳಿಗೆ ಅಪ್ರೆಂಟಿಶಿಪ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ ಹಮ್ಮಿಕೊಳ್ಳಲಾಗಿದೆ.
ಕ್ಯಾಂಪಸ್ ಸಂದರ್ಶನದ ಅಂಗವಾಗಿ ಜುಲೈ 11 ರಂದು ಬೆಳಿಗ್ಗೆ 9 ಗಂಟೆಗೆ ಲಿಖಿತ ಪರೀಕ್ಷೆಯನ್ನು ಹಾಗೂ ಜುಲೈ 12 ರಂದು ಆನ್ಲೈನ್ ಮೂಲಕ ಮೌಖಿಕ ಪರೀಕ್ಷೆಯನ್ನು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕೊಪ್ಪಳ(ಟಣಕನಕಲ್, ಕುಷ್ಟಗಿ ರಸ್ತೆ, ಕೊಪ್ಪಳ) ಇಲ್ಲಿ ನಡೆಸಲಾಗುತ್ತದೆ.
ಹಿಂದಿನ ವರ್ಷಗಳಲ್ಲಿ ಐಟಿಐ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಹಾಗೂ ಪ್ರಸ್ತುತ ಸಾಲಿನ ಅಂತಿಮ ವರ್ಷದ ಐಟಿಐ (ಎನ್ಸಿವಿಟಿ/ಎಸ್ಸಿವಿಟಿ) ವಿದ್ಯಾರ್ಥಿಗಳಿಗೆ Electrician, Fitter, Turner, Mechanic Motor Vehicle, Mechanic Diesel, Tool & Die making(Jigs & Fixtures), Diesel Mechanic, Electronic Mechanic, Machinist & Welder ವೃತ್ತಿಗಳ ಅಭ್ಯರ್ಥಿಗಳಿಗೆ ಶಿಶಿಕ್ಷು ತರಬೇತಿಯನ್ನು ನೀಡಲಾಗುತ್ತದೆ.
ಎಸ್ಎಸ್ಎಲ್ಸಿ ನಲ್ಲಿ ಶೇ.40 ಕ್ಕಿಂತ ಹೆಚ್ಚು ಹಾಗೂ ಐಟಿಐ ನಲ್ಲಿ ಶೇ.50 ಮೇಲ್ಪಟ್ಟು ಅಂಕಗಳನ್ನು ಪಡೆದಿರುವ, 18 ರಿಂದ 23 ವರ್ಷ(24 ರಿಂದ 25 ವಯಸ್ಸಿನ ಅಭ್ಯರ್ಥಿಗಳಿಗೆ ಸೀಮಿತ ಅವಕಾಶ) ದೊಳಗಿನ ಆಸಕ್ತರು ತಮ್ಮ ಆಧಾರ್ ಕಾರ್ಡ, ಫೋಟೋ, ವಿದ್ಯಾರ್ಹತೆಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳು ಹಾಗೂ 2 ಸೆಟ್ ಝೆರಾಕ್ಸ್ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕೊಪ್ಪಳ (ಟಣಕನಕಲ್, ಕುಷ್ಟಗಿ ರಸ್ತೆ, ಕೊಪ್ಪಳ) ಇಲ್ಲಿಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.