alex Certify SSLC, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್: HAL ನಲ್ಲಿ ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್: HAL ನಲ್ಲಿ ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ: ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ವತಿಯಿಂದ ಐಟಿಐ ಪಾಸಾದ ಅಭ್ಯರ್ಥಿಗಳಿಂದ ಮಾರ್ಚ್-2022 ರ ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ.

ಅಪ್ರೆಂಟಿಷಿಪ್ ತರಬೇತಿಯನ್ನು ಫಿಟ್ಟರ್, ಟರ್ನರ್, ಮೆಶಿನಿಸ್ಟ್, ಎಲೆಕ್ಷ್ರಿಷಿಯನ್, ವೆಲ್ಡರ್, ಕೋಪಾ(ಸಿಒಪಿಎ) ಫೌಂಡ್ರಿಮ್ಯಾನ್, ಹಾಗೂ ಶೀಟ್ ಮೆಟಲ್ ವರ್ಕರ್ ವೃತ್ತಿಗಳಲ್ಲಿ ತರಬೇತಿ ನೀಡಲಾಗುತ್ತದೆ.

ಐ.ಟಿ.ಐ ನಲ್ಲಿ ತೇರ್ಗಡೆ ಹೊಂದಿರುವಂತಹ ಅಭ್ಯರ್ಥಿಗಳು apprenticshipindia.org / candidate – registration. ವೆಬ್‍ಸೈಟ್‍ನಲ್ಲಿ  ಆನ್‍ಲೈನ್ ಮೂಲಕ ನೋಂದಾಯಿಸಿ, ನೋಂದಣಿ ಸಂಖ್ಯೆಯನ್ನು ನಿಗದಿತ ಅರ್ಜಿ ನಮೂನೆಯಲ್ಲಿ ನಮೂದಿಸಿ, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ, ಡಿಸೆಂಬರ್, 31 ರೊಳಗೆ  ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಸಲ್ಲಿಸಬೇಕು ಹಾಗೂ ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ದೂ.ಸಂ.08272-225851 ನ್ನು ಸಂಪರ್ಕಿಸಬಹುದು ಎಂದು  ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...