ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಾಣದ ವಿಚಾರವಾಗಿ ತಮಿಳುನಾಡಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಅಣೆಕಟ್ಟು ನಿರ್ಮಾಣವನ್ನು ವಿರೋಧಿಸಿರುವ ತಮಿಳುನಾಡು ಬಿಜೆಪಿ ಈ ಸಂಬಂಧ ಗುರುವಾರ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದೆ.
“ಮೇಕೆದಾಟು ಅಣೆಕಟ್ಟೆ ನಿರ್ಮಿಸುವ ತನ್ನ ಯೋಜನೆಯನ್ನು ಕರ್ನಾಟಕ ಸರ್ಕಾರ ಕೈಬಿಡಬೇಕೆಂದು ನಾವು ಆಗ್ರಹಿಸುತ್ತೇವೆ. ಈ ಯೋಜನೆ ಮುಂದುವರೆಸಲು ಸರ್ಕಾರಕ್ಕೆ ಸೂಚಿಸಿರುವ ವಿರೋಧ ಪಕ್ಷಗಳನ್ನು ನಾವು ವಿರೋಧಿಸುತ್ತೇವೆ. ನಾವು ಈ ನಿರ್ಮಾಣವಾಗಲು ಬಿಡುವುದಿಲ್ಲ” ಎಂದು ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ತಿಳಿಸಿದ್ಧಾರೆ.
ಬೈಕ್ ಮೇಲೆ ರೋಮ್ಯಾನ್ಸ್: ಯುವ ಜೋಡಿಗೆ ಹಿಗ್ಗಾಮುಗ್ಗಾ ತರಾಟೆ
ಕರ್ನಾಟಕದಲ್ಲೂ ಬಿಜೆಪಿ ಸರ್ಕಾರವಿದ್ದು, ಅಣೆಕಟ್ಟೆ ನಿರ್ಮಿಸಲು ಮುಂದಾಗುವ ಬಗ್ಗೆ ಮಾತನ್ನಾಡುತ್ತಿದ್ದರೆ ಅತ್ತ ತಮಿಳುನಾಡಿನ ಬಿಜೆಪಿ ಘಟಕ ಈ ನಡೆಯನ್ನು ವಿರೋಧಿಸುತ್ತಿರುವುದು ಅನೇಕರ ಹುಬ್ಬೇರಿಸಿದೆ.
ಯಾವುದೇ ಕಾರಣಕ್ಕೂ ಮೇಕೆದಾಟು ಅಣೆಕಟ್ಟು ನಿರ್ಮಾಣದ ವಿಚಾರವಾಗಿ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದು, ಸುಮ್ಮನೇ ವಿರೋಧ ಮಾಡಬೇಕೆಂದು ಈ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದಿದ್ದಾರೆ.