alex Certify BIG BREAKING: ಕೋಟ್ಯಂತರ ರೂ. ವಂಚನೆ ಪ್ರಕರಣದಲ್ಲಿ ಶಾಸಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೋಟ್ಯಂತರ ರೂ. ವಂಚನೆ ಪ್ರಕರಣದಲ್ಲಿ ಶಾಸಕ ಅರೆಸ್ಟ್

ಕಾಸರಗೋಡು: ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯಾದ ಒಂದು ದಿನದ ನಂತರ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್(ಐಯುಎಂಎಲ್) ಮುಖಂಡ ಹಾಗೂ ಮಂಜೇಶ್ವರ ಶಾಸಕ ಎಂ.ಸಿ. ಕಮರುದ್ದೀನ್ ಅವರನ್ನು ಬಂಧಿಸಲಾಗಿದೆ.

ಚಿನ್ನದ ವ್ಯವಹಾರದಲ್ಲಿ ಠೇವಣಿದಾರರನ್ನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮರುದ್ದೀನ್ ಅವರನ್ನು ಬಂಧಿಸಲಾಗಿದೆ. ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ವಿವೇಕ್ ಕುಮಾರ್ ನೇತೃತ್ವದ ವಿಶೇಷ ತನಿಖಾ ತಂಡ ಸುದೀರ್ಘ ವಿಚಾರಣೆಯ ಬಳಿಕ ಅವರನ್ನು ಬಂಧಿಸಿದೆ.

ಫ್ಯಾಶನ್ ಗೋಲ್ಡ್ ಎಂಬ ಬ್ರಾಂಡ್ ಹೆಸರಿನಲ್ಲಿ ನಡೆಯುವ ಚಿನ್ನದ ವ್ಯವಹಾರದಲ್ಲಿ 115 ಠೇವಣಿದಾರರು ಕಮರುದ್ದೀನ್ ವಿರುದ್ಧ ವಂಚನೆ ಆರೋಪ ಮಾಡಿದ್ದರು. 15 ಕೋಟಿ ರೂಪಾಯಿ ಚಿನ್ನದ ವ್ಯವಹಾರದ ಠೇವಣಿ ಹಗರಣ ಇದಾಗಿದ್ದು ಇದರಲ್ಲಿ ಶಾಸಕರು 13 ಕೋಟಿ ರೂ. ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...