ರಾಯಚೂರು : ರಾಯಚೂರಿನ ಸಿಂಧನೂರಿನಲ್ಲಿ ಬಾಣಂತಿಯರಿಗೆ ನೀಡಲಾಗಿದ್ದ ಐವಿ ದ್ರಾವಣ ಬಳಕೆಗೆ ಯೋಗ್ಯವಲ್ಲ ಎಂಬ ಆಘಾತಕಾರಿ ವರದಿ ಬಯಲಾಗಿದೆ.
ನಾಲ್ವರು ಬಾಣಂತಿಯರ ಸಾವಿಗೆ ಕಾರಣವಾಗಿದೆ ಎನ್ನಲಾದ ಐವಿ ರಿಂಗರ್ ಲ್ಯಾಕ್ವೇಟ್ ದ್ರಾವಣವನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ದ್ರಾವಣದಲ್ಲಿನ ಎಂಡೋ ಟಾಕ್ಸಿನ್ ಎಂಬ ಅಂಶ ಬಳಕೆಗೆ ಯೋಗ್ಯವಲ್ಲ ಎಂಬ ವರದಿ ಬಂದಿದೆ. ಬೆಂಗಳೂರು ಹಾಗೂ ಹೈದರಾಬಾದ್ ನ ಲ್ಯಾಬ್ ಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.
ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಮುಂದುವರೆದಿದ್ದು, ರಾಯಚೂರು. ಬೆಳಗಾವಿ, ಬೆಂಗಳೂರು ಸೇರಿದಂತೆ ಹಲವು ಕಡೆ ವಿವಿಧ ಕಾರಣಕ್ಕೆ ಬಾಣಂತಿಯರು ಮೃತಪಟ್ಟಿದ್ದರು.