ಮಂಗಳೂರು: ಬಿಪಿಎಲ್ ಕಾರ್ಡ್ ದಾರರಿಗೆ ಮಾತ್ರವಲ್ಲ, ಎಪಿಎಲ್ ಕಾರ್ಡ್ ದಾರರಿಗೆ ಪರಿಹಾರ ನೀಡಬೇಕು ಎಂದು, ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾ ಆಗ್ರಹಿಸಿದ್ದಾರೆ.
ಕೊರೋನಾ ಸೋಂಕಿನಿಂದ ಮೃತಪಟ್ಟ ಬಿಪಿಎಲ್ ಕಾರ್ಡ್ ದಾರರಿಗೆ ಮಾತ್ರ ಪರಿಹಾರ ನೀಡುವುದಾಗಿ ಸರ್ಕಾರ ತಿಳಿಸಿದೆ. 1 ಲಕ್ಷ ರೂ. ಬದಲಿಗೆ 5 ಲಕ್ಷ ರೂ. ಪರಿಹಾರ ನೀಡಬೇಕು. ಬಿಪಿಎಲ್ ಜೊತೆಗೆ ಎಪಿಎಲ್ ಕಾರ್ಡ್ ದಾರರಿಗೂ ಪರಿಹಾರ ಕೊಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.