ಕೋಟ್ಯಾಂತರ ಭಕ್ತರ ಕನಸು ನನಸಾಗಿದ್ದು, ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ನಿನ್ನೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸಮಸ್ತ ಜನತೆಯ ಪರವಾಗಿ ಯಜಮಾನನಾಗಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಮೂಲಕ ಇಂದಿನಿಂದ ಭಕ್ತರ ದರ್ಶನಕ್ಕೆ ಬಾಲ ರಾಮ ಮುಕ್ತನಾಗಲಿದ್ದಾನೆ.
ಸದ್ಯ ಪ್ರಧಾನಿ ಮೋದಿ ಅವರು ಬಾಲರಾಮನ ಪ್ರತಿಷ್ಟಾಪನೆ ವಿಡಿಯೋ ಹಾಗೂ ಪೋಸ್ಟ್ ಹಂಚಿಕೊಂಡಿದ್ದಾರೆ. ಅಯೋಧ್ಯೆಯಲ್ಲಿ ಭಗವಾನ್ ರಾಮನ ಪ್ರತಿಷ್ಠಾಪನಾ ಸಮಾರಂಭದ ಒಂದು ದಿನದ ನಂತರ, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಜಗತ್ತು ಕಂಡದ್ದು ನೆನಪುಗಳಲ್ಲಿ ಅಚ್ಚಳಿಯದೆ ಉಳಿಯುತ್ತದೆ ಎಂದು ಹೇಳಿದ್ದಾರೆ.