ಜಮ್ಮುವಿನ ಸಿದ್ರಾ ಪ್ರದೇಶದ ಮನೆಯಲ್ಲಿ ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಮ್ಮುವಿನ ಸಿದ್ರಾ ಪ್ರದೇಶದ ತಮ್ಮ ನಿವಾಸದಲ್ಲಿ ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿದ್ದಾರೆ. ಮೃತದೇಹಗಳನ್ನು ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ ವಿವರಗಳಿಗಾಗಿ ಕಾಯಲಾಗುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಮುಂಜಾನೆ, ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಚೋಟಿಪೋರಾ ಪ್ರದೇಶದ ಸೇಬಿನ ತೋಟದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಕಾಶ್ಮೀರಿ ಪಂಡಿತನೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿದ್ದು, ಅವರ ಸಹೋದರ ಗಾಯಗೊಂಡಿದ್ದಾರೆ.
ಮೃತರನ್ನು ಸುನೀಲ್ ಕುಮಾರ್ ಭಟ್ ಎಂದು ಗುರುತಿಸಲಾಗಿದೆ. ಅವರ ಸಹೋದರ ಪಿಂಟು ಅವರಿಗೆ ಗಾಯಗಳಾಗಿವೆ. ಘಟನೆ ಬಳಿಕ ಸ್ಥಳದಲ್ಲಿ ಭದ್ರತಾ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.