ಜಮ್ಮು: ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ನಾಗರಿಕ ಸಂಜಯ್ ಶರ್ಮಾ ಅವರ ವಿಧವೆ ಪತ್ನಿ ಸುನೀತಾ ಶರ್ಮಾ ಅವರಿಗೆ ಭಾನುವಾರ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು.
ಈ ವರ್ಷ ಫೆಬ್ರವರಿ 26 ರಂದು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅಚಾನ್ ಪ್ರದೇಶದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಕೊಲ್ಲಲ್ಪಟ್ಟರು.
ರಾಜ್ಯಪಾಲ ಸಿನ್ಹಾ ಅವರು ರಾಜಭವನದಲ್ಲಿ ವಿಧವೆಯರಿಗೆ ನೇಮಕಾತಿ ಪತ್ರವನ್ನು ಹಸ್ತಾಂತರಿಸುವ ಸಂದರ್ಭದಲ್ಲಿ ಸಂತ್ರಸ್ತ ಕುಟುಂಬಕ್ಕೆ ಸಾಧ್ಯವಿರುವ ಎಲ್ಲಾ ನೆರವು ಮತ್ತು ಬೆಂಬಲ ನೀಡುವುದಾಗಿ ಭರವಸೆ ನೀಡಿದರು.
ಕೊಲ್ಲಲ್ಪಟ್ಟ ನಾಗರಿಕ ಸಂಜಯ್ ಶರ್ಮಾ ಬ್ಯಾಂಕ್‌ನಲ್ಲಿ ಭದ್ರತಾ ಸಿಬ್ಬಂದಿಯಾಗಿದ್ದ. ಪುಲ್ವಾಮಾ ಜಿಲ್ಲೆಯ ಅಚಾನ್‌ನಲ್ಲಿ ಸ್ಥಳೀಯ ಮಾರುಕಟ್ಟೆಗೆ ತೆರಳುತ್ತಿದ್ದ ಸಂಜಯ್ ಶರ್ಮಾ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.