ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸಲಾಗಿದ್ದು, ಬಾರಾಮುಲ್ಲಾ ಸಮೀಪ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಕಳೆದ 24 ಗಂಟೆಯಲ್ಲಿ ಕಾಶ್ಮೀರದಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ.
ಕುಪ್ವಾರ ಜಿಲ್ಲೆಯ ಮಚಿಲ್ ಪ್ರದೇಶ ಬಳಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಇನ್ನು ಹಲವು ಉಗ್ರರು ಅಡಗಿ ಕುಳಿತಿರುವ ಶಂಕೆ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ.