alex Certify ಎನ್ ಕೌಂಟರ್ ನಲ್ಲಿ 5 ಭಯೋತ್ಪಾದಕರು ಫಿನಿಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎನ್ ಕೌಂಟರ್ ನಲ್ಲಿ 5 ಭಯೋತ್ಪಾದಕರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ನಡೆದ ಪ್ರತ್ಯೇಕ ಎನ್‌ ಕೌಂಟರ್‌ ಗಳಲ್ಲಿ ಒಟ್ಟು ಐವರು ಭಯೋತ್ಪಾದಕರು ಹತರಾಗಿದ್ದಾರೆ. ಕೇಂದ್ರಾಡಳಿತ ಪ್ರದೇಶದ ಪುಲ್ವಾಮಾ ಮತ್ತು ಕುಪ್ವಾರದಲ್ಲಿ ಎನ್‌ ಕೌಂಟರ್‌ ಗಳು ನಡೆಸಲಾಗಿದೆ.

ಪುಲ್ವಾಮಾದಲ್ಲಿ ಸೋಮವಾರ ಮುಂಜಾನೆ ಭದ್ರತಾ ಪಡೆಗಳು ನಡೆಸಿದ ಎನ್‌ ಕೌಂಟರ್‌ ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಗುಂಡಿನ ಚಕಮಕಿಯ ಕುರಿತು ಪ್ರತಿಕ್ರಿಯಿಸಿದ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಕುಲ್ಗಾಮ್ ಮತ್ತು ಕುಪ್ವಾರದಲ್ಲಿ ನಡೆಯುತ್ತಿರುವ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಕುಪ್ವಾರದಲ್ಲಿ ಪೊಲೀಸರು ಭಾನುವಾರ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ನಾಲ್ವರು ಭಯೋತ್ಪಾದಕರನ್ನು ತಟಸ್ಥಗೊಳಿಸಿದ್ದಾರೆ.

ಸೋಮವಾರ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಎನ್‌ ಕೌಂಟರ್‌ ನಲ್ಲಿ ಇನ್ನಿಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಹೇಳಿದ್ದು, ಸ್ಥಳದಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...