alex Certify BREAKING NEWS: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ತಾತ್ಕಾಲಿಕ ರಿಲೀಫ್; ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಿಂದ ಮಧ್ಯಂತರ ಜಾಮೀನು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ತಾತ್ಕಾಲಿಕ ರಿಲೀಫ್; ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಿಂದ ಮಧ್ಯಂತರ ಜಾಮೀನು

ವಂಚಕ ಸುಕೇಶ್ ಚಂದ್ರಶೇಖರನ್ ಬಹುಕೋಟಿ ವಂಚನೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸೋಮವಾರದಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಿಂದ 50 ಸಾವಿರ ರೂಪಾಯಿ ಬಾಂಡ್ ಆಧಾರದ ಮೇಲೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ.

ನ್ಯಾಯಾಧೀಶ ಶೈಲೆಂದರ್ ಮಲ್ಲಿಕ್ ಮಧ್ಯಂತರ ತಾತ್ಕಾಲಿಕ ಜಾಮೀನು ಮಂಜೂರು ಮಾಡಿದ್ದು, ಜಾರಿ ನಿರ್ದೇಶನಾಲಯಕ್ಕೆ ಪ್ರತಿಕ್ರಿಯೆ ಸಲ್ಲಿಸಲು ಸೂಚಿಸಿದ್ದಾರೆ. ಹೀಗಾಗಿ ಜಾಕ್ವೆಲಿನ್ ಫರ್ನಾಂಡಿಸ್ ರೆಗ್ಯುಲರ್ ಬೇಲ್ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಮುಂದುವರೆಯಲಿದೆ.

ಸುಕೇಶ್ ಚಂದ್ರಶೇಖರ್ 200 ಕೋಟಿ ರೂಪಾಯಿ ವಂಚಿಸಿದ ಪ್ರಕರಣದ ವಿಚಾರಣೆ ಪಟಿಯಾಲಾ ಹೌಸ್ ಕೋರ್ಟ್ ನಲ್ಲಿ ನಡೆಯುತ್ತಿದ್ದು, ಈ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಆರೋಪಿಯನ್ನಾಗಿ ಹೆಸರಿಸಲಾಗಿದೆ. ಹೀಗಾಗಿ ಅವರು ಬಂಧನದ ಭೀತಿ ಎದುರಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...