ಸುಲಿಗೆ ಆರೋಪದಲ್ಲಿ ವಿಚಾರಣೆ ಎದುರಿಸುತ್ತಿರುವ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಗೆ ಕಡೆಗೂ ವಿದೇಶಕ್ಕೆ ತೆರಳಲು ಅನುಮತಿ ದೊರೆತಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿರುವ ದೆಹಲಿ ನ್ಯಾಯಾಲಯ ಮೇ 31 ರಿಂದ ಜೂನ್ 6 ರವರೆಗೆ ವಿದೇಶಕ್ಕೆ ತೆರಳಲು ಅನುಮತಿ ನೀಡಿದೆ. ಆದರೆ, ಇದಕ್ಕೆ ಕೆಲವು ಷರತ್ತುಗಳನ್ನು ವಿಧಿಸಿದೆ.
ಇದರಿಂದಾಗಿ ಜಾಕ್ವೆಲಿನ್ ಅಬುಧಾಬಿಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಭಾರತೀಯ ಸಿನಿಮಾ ಅಕಾಡೆಮಿ ಪ್ರಶಸ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅನುಮತಿ ಸಿಕ್ಕಂತಾಗಿದೆ.
ವರದಕ್ಷಿಣೆ ಕಿರುಕುಳ: ಇಬ್ಬರು ಮಕ್ಕಳೊಂದಿಗೆ ಮೂವರು ಸಹೋದರಿಯರ ಆತ್ಮಹತ್ಯೆ
ಸುಖೇಶ್ ಚಂದ್ರಶೇಖರ್ ಅವರು 200 ಕೋಟಿ ರೂಪಾಯಿಗಳನ್ನು ಅಕ್ರಮ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪದಲ್ಲಿ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದ್ದು, ಚಂದ್ರಶೇಖರ್ ಅವರನ್ನು ವಿಚಾರಣೆಗೆ ಒಳಪಡಿಸಿದೆ.
ಚಂದ್ರಶೇಖರ್ ನಟಿ ಜಾಕ್ವೆಲಿನ್ ಗೆ ಸುಮಾರು 7 ಕೋಟಿ ರೂಪಾಯಿ ಮೌಲ್ಯದ ಉಡುಗೊರೆ ಮತ್ತು ಆಸ್ತಿಯನ್ನು ನೀಡಿದ್ದರು ಎಂಬ ಆರೋಪವೂ ಕೇಳಿ ಬಂದ ಹಿನ್ನೆಲೆಯಲ್ಲಿ ಉಡುಗೊರೆ ಮತ್ತು ಆಸ್ತಿಯನ್ನು ಜಪ್ತಿ ಮಾಡಲಾಗಿದೆ.
ಈ ಪ್ರಕರಣದಕ್ಕೆ ಸಂಬಂಧಿಸಿದಂತೆ ಇ.ಡಿ ಜಾಕ್ವೆಲಿನ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದೆ. ಈ ಮಧ್ಯೆ, ಅಬುಧಾಬಿಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅನುಮತಿ ನೀಡಬೇಕೆಂದು ಜಾಕ್ವೆಲಿನ್ ದೆಹಲಿಯ ಪಟಿಯಾಲ ಹೌಸ್ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ವಿದೇಶ ಪ್ರಯಾಣಕ್ಕೆ ಅನುಮತಿ ನೀಡಿದೆ.