
ನವದೆಹಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ಮಾಜಿ ಸಿಎಂ, ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ವಾಪಾಸ್ ಕರೆತರಲು ಸಾಕಷ್ಟು ಕಸರತ್ತು ಆರಂಭವಾಗಿದೆ ಎಂಬ ಚರ್ಚೆ ಬೆನ್ನಲ್ಲೇ ಇದೀಗ ಜಗದೀಶ್ ಶೆಟ್ಟರ್ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ.
ಅಮಿತ್ ಶಾ ನಿವಾಸದಲ್ಲಿ ಮಹತ್ವದ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಜಗದೀಶ್ ಶೆಟ್ಟರ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟಾರೆ ಅಮಿತ್ ಶಾ ನಿವಾಸದಲ್ಲಿ ಹೈವೋಲ್ಟೇಜ್ ಸಭೆ ನಡೆದಿದ್ದು, ಜಗದೀಶ್ ಶೆಟ್ಟರ್ ನಡೆ ತೀವ್ರ ಕುತೂಹಲ ಮೂಡಿಸಿದೆ.