alex Certify ಹಾಲಿ ಬಿಜೆಪಿ ಶಾಸಕರಲ್ಲಿ ಕೆಲವರಿಗೆ ಟಿಕೆಟ್ ತಪ್ಪುತ್ತಾ…? ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಹತ್ವದ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಲಿ ಬಿಜೆಪಿ ಶಾಸಕರಲ್ಲಿ ಕೆಲವರಿಗೆ ಟಿಕೆಟ್ ತಪ್ಪುತ್ತಾ…? ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಹತ್ವದ ಹೇಳಿಕೆ

ಹುಬ್ಬಳ್ಳಿ: ಇಂದು ರಾತ್ರಿಯೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಬಹುದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಂಜೆ ಬಿಜೆಪಿ ಸಂಸದೀಯ ಮಂಡಳಿ ಸಭೆ ನಿಗದಿಯಾಗಿದೆ. ರಾತ್ರಿಯೇ ಮೊದಲ ಪಟ್ಟಿ ಬಿಡುಗಡೆಯಾಗುವ ಮಾಹಿತಿ ಇದೆ ಎಂದರು.

ಈ ಬಾರಿ ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಕೈತಪ್ಪುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶೆಟ್ಟರ್. ಕೆಲವು ಶಾಸಕರಿಗೆ ವಿರೋಧಿ ಅಲೆ, ಆರೋಗ್ಯ ಸಮಸ್ಯೆ ಇರುತ್ತದೆ. ಹಾಗಾಗಿ ಟಿಕೆಟ್ ಕೈ ತಪ್ಪುತ್ತದೆ ಎಂಬ ಚರ್ಚೆ ಇರುತ್ತದೆ ಎಂದರು.

ಧಾರವಾಡದಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪುವ ಬಗ್ಗೆ ಮಾತನಾಡಿದ ಶೆಟ್ಟರ್, ಈ ಕುರಿತು ನಮ್ಮ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಈ ಬಾರಿ ನಾನು ಸ್ಪರ್ಧೆ ಮಾಡುತ್ತೇನೆ. ಎಲ್ಲದಕ್ಕೂ ಇಂದು ರಾತ್ರಿ ಉತ್ತರ ಸಿಗಲಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...