alex Certify ವಿಧಾನ ಪರಿಷತ್ ಗೆ ಜಗದೀಶ್ ಶೆಟ್ಟರ್, ಬೋಸರಾಜು, ಚಿಂಚನಸೂರುಗೆ ಕಾಂಗ್ರೆಸ್ ಟಿಕೆಟ್…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನ ಪರಿಷತ್ ಗೆ ಜಗದೀಶ್ ಶೆಟ್ಟರ್, ಬೋಸರಾಜು, ಚಿಂಚನಸೂರುಗೆ ಕಾಂಗ್ರೆಸ್ ಟಿಕೆಟ್…?

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ಖಾಲಿಯಾದ 3 ಸ್ಥಾನಗಳಿಗೆ ಜೂನ್‌ 30 ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ನಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಚಿಂಚನಸೂರು ಹಾಗೂ ಬೋಸರಾಜು ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಎನ್.ಎಸ್. ಬೋಸರಾಜು ಮತ್ತು ಬಾಬುರಾವ್ ಚಿಂಚನಸೂರು ಅವರನ್ನು ಕಾಂಗ್ರೆಸ್ ನಿಂದ ಕಣಕ್ಕಿಳಿಸುವುದು ಬಹುತೇಕ ಅಂತಿಮವಾಗಿದೆ. ಮತ್ತೊಂದು ಸ್ಥಾನಕ್ಕೆ ಜಗದೀಶ್ ಶೆಟ್ಟರ್ ಅವರಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಲಕ್ಷ್ಮಣ ಸವದಿ, ಬಾಬುರಾವ್ ಚಿಂಚನಸೂರು ಮತ್ತು ಆರ್. ಶಂಕರ್ ಅವರು ವಿಧಾನಸಭೆ ಚುನಾವಣೆಗೆ ಮುನ್ನ ರಾಜೀನಾಮೆ ನೀಡಿದ್ದರಿಂದ ತೆರವಾದ ಮೂರು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಸಂಖ್ಯಾಬಲದ ಆಧಾರದ ಮೇಲೆ ಕಾಂಗ್ರೆಸ್ ಮೂರು ಸ್ಥಾನಗಳನ್ನು ಗೆಲ್ಲಲಿದೆ.

ನಾಮಪತ್ರ ಸಲ್ಲಿಕೆಗೆ ಮಂಗಳವಾರ ಕೊನೆಯ ದಿನವಾಗಿದೆ. ಸಚಿವರಾಗಿರುವ ಎನ್.ಎಸ್. ಬೋಸರಾಜು ಅವರಿಗೆ ಟಿಕೆಟ್ ಖಚಿತವಾಗಿದ್ದು, ಬಾಬುರಾವ್ ಚಿಂಚನಸೂರು ಮತ್ತು ಜಗದೀಶ್ ಶೆಟ್ಟರ್ ಅವರಿಗೂ ಅವಕಾಶ ನೀಡಲು ಪಕ್ಷದ ನಾಯಕರು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...