alex Certify ಆಯಾ ಜಿಲ್ಲಾ ಸಚಿವರಿಗೆ ಉಸ್ತುವಾರಿ ನೀಡಬೇಕು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಯಾ ಜಿಲ್ಲಾ ಸಚಿವರಿಗೆ ಉಸ್ತುವಾರಿ ನೀಡಬೇಕು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಆಯಾ ಜಿಲ್ಲೆಯ ಸಚಿವರಿಗೆ ಜಿಲ್ಲಾ ಉಸ್ತುವಾರಿ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಭಿಪ್ರಾಯಪಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತಮ ಆಡಳಿತ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಆಯಾ ಜಿಲ್ಲೆಯ ಸಚಿವರಿಗೆ ಜಿಲ್ಲಾ ಉಸ್ತುವಾರಿ ನೀಡುವುದು ಒಳ್ಳೆಯದು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ತಿಳಿಸಿದ್ದಾರೆ.

ಪಕ್ಷದ ವರಿಷ್ಠರ ನಿರ್ದೇಶನದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿದ್ದು, ಇದಕ್ಕೆ ಯಾವ ರೀತಿ ಸ್ಪಂದನೆ ವ್ಯಕ್ತವಾಗುತ್ತದೆ ಎನ್ನುವುದನ್ನು ಸ್ವಲ್ಪ ದಿನ ಕಾದು ನೋಡಿ ನನ್ನ ಅಭಿಪ್ರಾಯವನ್ನು ಪಕ್ಷದ ನಾಯಕರಿಗೆ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ಉಸ್ತುವಾರಿ ಸಚಿವರ ಬದಲಾವಣೆಯ ಇಂತಹ ಪ್ರಯೋಗದಿಂದ ಮುಂಬರುವ ಚುನಾವಣೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...